ಗ್ರಾಮಾಭಿವೃದ್ಧಿ ಯೋಜನೆಯಿಂದ ಆರ್ಥಿಕ ಸದೃಢತೆ: ಸಲಹೆ

ಮಂಗಳವಾರ, ಜೂಲೈ 23, 2019
25 °C

ಗ್ರಾಮಾಭಿವೃದ್ಧಿ ಯೋಜನೆಯಿಂದ ಆರ್ಥಿಕ ಸದೃಢತೆ: ಸಲಹೆ

Published:
Updated:

ಮಲೇಬೆನ್ನೂರು: ಗ್ರಾಮಾಭಿವೃದ್ಧಿ ಯೋಜನೆ ಅಡಿ ಆರ್ಥಿಕವಾಗಿ ಸದೃಢರಾಗಲು ಸ್ವಸಹಾಯ ಸಂಘಗಳು ಕಂಕಣಬದ್ಧರಾಗಬೇಕು ಎಂದು ಜಿಲ್ಲಾ ಪಂಚಾಯ್ತಿ ಸದಸ್ಯ ಬೆಣ್ಣೆಹಳ್ಳಿ ಹಾಲೇಶಪ್ಪ ಸಲಹೆ ನೀಡಿದರು.

ಸಮೀಪದ ಕೊಮಾರನಹಳ್ಳಿ ಹೆಳವನಕಟ್ಟೆ ಲಕ್ಷ್ಮೀರಂಗನಾಥ ದೇವಾಲಯದ ಸಭಾಂಗಣದಲ್ಲಿ ಈಚೆಗೆ ನಡೆದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಸ್ವಸಹಾಯ ಗುಂಪುಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶದ ಜನರು ತಮ್ಮ ಮಕ್ಕಳ ಉಜ್ವಲ ಭವಿಷ್ಯ ರೂಪಿಸಿ ಉತ್ತಮ ಪ್ರಜೆಗಳನ್ನಾಗಿಸಲು ಹೆಣ್ಣು-ಗಂಡು ಭೇದಭಾವ ಮಾಡದೇ ಮೊದಲು ಮಕ್ಕಳಿಗೆ ಶಿಕ್ಷಣ ನೀಡಲು ಶಾಲೆಗೆ ಕಳುಹಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಆದರ್ಶ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅನುಷ್ಠಾನಕ್ಕೆ ಪರಸ್ಪರ ಸಹಕರಿಸಿ ಮುಂದೆ ಬರಬೇಕು ಎಂದು ಸಲಹೆ ನೀಡಿದರು.

ಪ್ರಾಸ್ತಾವಿಕ ಮಾತನಾಡಿದ ಮೇಲ್ವಿಚಾರಣಾಧಿಕಾರಿ ಮಹಾಂತೇಶ್, ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು   ವಿವರ ನೀಡಿದರು.

ತಾಲ್ಲೂಕು ಪಂಚಾಯ್ತಿ ಸದಸ್ಯ ಐರಣಿ ಅಣ್ಣೇಶ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಗ್ರಾಮಾಭಿವೃದ್ಧಿ ಯೋಜನೆ ಹೊಸ ರೂಪ ನೀಡುತ್ತಿದೆ. ಬಡ ಜನರನ್ನು ಅದರಲ್ಲೂ ಮಹಿಳೆಯರನ್ನು ಸಂಘಟಿಸಿ ಮುಖ್ಯವಾಹಿನಿಗೆ ತರುತ್ತಿದೆ. ಯೋಜನೆಯ ಸೌಲಭ್ಯಗಳು ನೈಜ ಫಲಾನುಭವಿಗಳಿಗೆ ತಲುಪಬೇಕು. ಇದರಲ್ಲಿ ಸದಸ್ಯರು ಚೆನ್ನಾಗಿ ಕೆಲಸ ಮಾಡಬೇಕು. ಯೋಜನೆಯಿಂದ ಗ್ರಾಮೀಣ ಪ್ರದೇಶದ ಬಡ ಜರು ಆರ್ಥಿಕ ಸ್ಥಿತಿ ಸುಧಾರಿಸಲಿ ಎಂದು ಹಾರೈಸಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ `ಗ್ರೀನ್ ಆಸ್ಕರ್~ ಪ್ರಶಸ್ತಿ ಬಂದಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು. ಸಂಸ್ಥೆ ಮೇಲ್ವಿಚಾರಕ ಈರಣ್ಣ ಕಾರ್ಯಕ್ರಮ ನಿರೂಪಿಸಿದರು. ರೂಪಾ ಸ್ವಾಗತಿಸಿದರು, ಗಾಯತ್ರಿ ವಂದಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry