ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಒತ್ತು: ಸಿದ್ದೇಶ್ವರ

7

ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಒತ್ತು: ಸಿದ್ದೇಶ್ವರ

Published:
Updated:

ಚನ್ನಗಿರಿ:  ನಾಲ್ಕೂವರೆ ವರ್ಷದಲ್ಲಿ ಜಿಲ್ಲೆಗೆ ರೂ  4 ಸಾವಿರ ಕೋಟಿ ಅನುದಾನ ಸರ್ಕಾರದಿಂದ ಬಂದಿದ್ದು, ಇದರಲ್ಲಿ ಚನ್ನಗಿರಿ ತಾಲ್ಲೂಕಿಗೆ ರೂ 800 ಕೋಟಿ ಅನುದಾನವನ್ನು ಶಾಸಕರು ತಂದು ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.ತಾಲ್ಲೂಕಿನ ರಾಜಗೊಂಡನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ ಹಾಗೂ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅಧ್ಯಕ್ಷತೆ ವಹಿಸಿದ್ದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಸರೋಜಮ್ಮ, ಸದಸ್ಯೆ ಶಂಕ್ರೀಬಾಯಿ, ಜಿಲ್ಲಾ ಪಂಚಾಯ್ತಿ ಸದಸ್ಯೆ ಮೀನಾಕ್ಷಿಬಾಯಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಯು. ಬಸವರಾಜು, ಪಟ್ಟಣ ಪಂಚಾಯ್ತಿ ಸದಸ್ಯ ಕೆ.ಪಿ.ಎಂ. ಶಿವಲಿಂಗಯ್ಯ, ಸೋಮಶೇಖರ್, ಶಿವಲಿಂಗಪ್ಪ, ಚಿದಾನಂದಮೂರ್ತಿ ಉಪಸ್ಥಿತರಿದ್ದರು.ದಿವ್ಯಾ ಪ್ರಾರ್ಥಿಸಿದರು. ಜಿ.ಎಸ್. ಪಾಲಾಕ್ಷಪ್ಪ ಸ್ವಾಗತಿಸಿದರು. ಡಿ.ಎಸ್. ಭೈರೇಶ್ ಕಾರ್ಯಕ್ರಮ ನಿರೂಪಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry