ಸೋಮವಾರ, ಏಪ್ರಿಲ್ 12, 2021
23 °C

ಗ್ರಾಮೀಣ ಕ್ರೀಡೆಗಳು ಬಾಂಧವ್ಯ ವೃದ್ಧಿಗೆ ಸಹಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೋಮವಾರಪೇಟೆ: ಗ್ರಾಮೀಣ ಭಾಗದ ಜನತೆ ವರ್ಷವಿಡೀ ಕೃಷಿ ಚಟುವಟಿಕೆಯಲ್ಲೇ ಮುಳುಗಿದ್ದು, ವರ್ಷಕ್ಕೊಮ್ಮೆ ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಪರಸ್ಪರ ಬಾಂಧವ್ಯ ವೃದ್ಧಿಯೊಂದಿಗೆ ಕ್ರೀಡಾಭಿರುಚಿಯನ್ನೂ ಮೈಗೂಡಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಲಕ ರೈ ಹೇಳಿದರು. ನೆಹರು ಯುವ ಕೇಂದ್ರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಜಿಲ್ಲೆ ಮತ್ತು ತಾಲ್ಲೂಕು ಯುವ ಒಕ್ಕೂಟ, ಹಾನಗಲ್ಲು ಶೆಟ್ಟಳ್ಳಿ ಗ್ರಾಮದ ಚಂದ್ರೋದಯ ಯುವಕ ಸಂಘಗಳ ಸಂಯುಕ್ತಾಶ್ರಯದಲ್ಲಿ ಸಮೀಪದ ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಶಾಲಾ ಮೈದಾನದಲ್ಲಿ ಗುರುವಾರ ಆಯೋಜಿಸಲಾಗಿದ್ದ 18ನೇ ವರ್ಷದ ಅಂತರ್ ಜಿಲ್ಲಾ ಮಟ್ಟದ ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಜಿಲ್ಲಾ ಯುವ ಒಕ್ಕೂಟದ ಕಾರ್ಯದರ್ಶಿ ಚಾಮೇರ ದಿನೇಶ್ ಮಾತನಾಡಿ, ಯುವಕ ಸಂಘಗಳು ಸದಾ ಚಟುವಟಿಕೆಯಿಂದ ಇರಬೇಕು. ಕ್ರೀಡಾಕೂಟಗಳನ್ನು  ಏರ್ಪಡಿಸುವುದರಿಂದ ಗ್ರಾಮೀಣ ಕ್ರೀಡೆಗಳಿಗೆ ಹಾಗೂ ಗ್ರಾಮಾಭಿವೃದ್ಧಿಗೆ ಹೆಚ್ಚಿನ ಉತ್ತೇಜನ ನೀಡಿದಂತಾಗುತ್ತದೆ. ದೈನಂದಿನ ಜೀವನದ ಜಂಜಾಟದ ನಡುವೆ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಹಾಗೂ ದೈಹಿಕ ಶಕ್ತಿಯೂ ವೃದ್ಧಿಸುತ್ತದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಂದ್ರೋದಯ ಯುವಕ ಸಂಘದ ಅಧ್ಯಕ್ಷ ಬಿ.ಎಸ್.ಕೃಷ್ಣಪ್ಪ ವಹಿಸಿದ್ದರು. ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ಕೆ.ಪಿ.ಭಾನುಪ್ರಕಾಶ್, ಉಪಾಧ್ಯಕ್ಷ ಚಂದ್ರಶೇಖರ್, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಗಂಗಮ್ಮ, ಗ್ರಾಮದ ಪ್ರಮುಖರಾದ ವಿಠಲ,ಜೋಯಪ್ಪ, ಪ್ರೀತಂ, ರಾಕೇಶ್ ಪಟೇಲ್ ಉಪಸ್ಥಿತರಿದ್ದರು.ಸಂಘದ ಸದಸ್ಯರಾದ ಸುರೇಶ್ ಸ್ವಾಗತಿಸಿದರು. ಆನಂದ್ ವಂದಿಸಿ, ಶರತ್‌ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭ ಹಾನಗಲ್ಲು ಶೆಟ್ಟಳ್ಳಿ ಶಾಲೆಯ ಒಂದನೇ ತರಗತಿಯಿಂದ 7ನೇ ತರಗತಿವರೆಗೆ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪಟೇಲ್ ರಾಜು ಅವರು ಪ್ರಾಯೋಜಿಸಿದ ಪ್ರೋತ್ಸಾಹಧನವನ್ನು ವಿತರಿಸಲಾಯಿತು. ಬಳಿಕ ವಾಲಿಬಾಲ್ ಹಾಗೂ ಥ್ರೋಬಾಲ್ ಪಂದ್ಯಾಟಗಳು ನಡೆದವು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.