ಶನಿವಾರ, ಡಿಸೆಂಬರ್ 14, 2019
20 °C

ಗ್ರಾಮೀಣ ಕ್ರೀಡೆ ಪ್ರೋತ್ಸಾಹಿಸಲು ಸಲಹೆ

ಪ್ರಜಾವಾಣಿವಾರ್ತೆ Updated:

ಅಕ್ಷರ ಗಾತ್ರ : | |

ಗ್ರಾಮೀಣ ಕ್ರೀಡೆ ಪ್ರೋತ್ಸಾಹಿಸಲು ಸಲಹೆ

ಆನೇಕಲ್: ಗ್ರಾಮೀಣ ಕ್ರೀಡೆಗಳು ಇತ್ತೀಚೆಗೆ ಕಣ್ಮರೆಯಾಗುತ್ತಿದ್ದ, ಅವುಗಳಿಗೂ ಪ್ರೋತ್ಸಾಹಿಸಿ ಬೆಳೆಸಬೇಕು ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ನುಡಿದರು.ಪಟ್ಟಣದ ಮಾರುತಿ ಮಲ್ಟಿಜಿಮ್ ಸೋಮವಾರ ಹಮ್ಮಿಕೊಂಡಿದ್ದ ವತಿಯಿಂದ ತಾಲ್ಲೂಕು ಮಟ್ಟದ ದೇಹದಾರ್ಢ್ಯ ಸ್ಪರ್ಧೆ `ಮಿಸ್ಟರ್ ಶ್ರೀಮಾರುತಿ-2012~ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.ಪ್ರತಿಯೊಂದು ಗ್ರಾಮದಲ್ಲಿಯೂ ಹಿಂದಿನ ದಿನಗಳಲ್ಲಿ ಗರಡಿ ಮನೆಗಳಿದ್ದು ಯುವಕರು ವ್ಯಾಯಾಮದಲ್ಲಿ ತೊಡಗಿಸಿಕೊಂಡು ವಿವಿಧ ಪಟ್ಟುಗಳನ್ನು ಕಲಿಯುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಆಧುನಿಕತೆಯ ಪ್ರಭಾವದಿಂದ ವ್ಯಾಯಾಮ ಶಾಲೆಗಳು ಮರೆಯಾಗುತ್ತಿವೆ ಎಂದರು.ಬಮುಲ್ ನಿರ್ದೇಶಕ ಆರ್.ಕೆ.ರಮೇಶ್ ಮಾತನಾಡಿ, ತಾಲ್ಲೂಕು ಮಟ್ಟದ ದೇಹದಾರ್ಢ್ಯ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವವರು ಕ್ರೀಡಾ ಮನೋಭಾವದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು. ಜಿಲ್ಲಾ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಉತ್ತಮ ಸಾಧನೆ ತೋರಬೇಕು ಎಂದರು.ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ.ರಾಮಚಂದ್ರ ಮಾತನಾಡಿ, ಪಟ್ಟಣದಲ್ಲಿ ಕ್ರೆಡಾ ಚಟುವಟಿಕೆಗಳು ನಡೆಯಲು ಸುಸಜ್ಜಿತ ಕ್ರೀಡಾಂಗಣವಿಲ್ಲ. ಇದರಿಂದ ಕ್ರೀಡಾ ಚಟುವಟಿಕೆಗಳಿಗೆ ತೊಂದರೆಯಾಗಿದೆ ಎಂದರು.ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಅಧ್ಯಕ್ಷತೆ ವಹಿಸಿದ್ದರು. ಪುರಸಭಾ ಸದಸ್ಯ ಜಿ.ಗೋಪಾಲ್, ವಾಟಳ್ ನಾಗರಾಜ್ ಅಭಿಮಾನಿಗಳ ಬಳಗದ ಅಧ್ಯಕ್ಷ ಆ.ನ.ನಾಗರಾಜ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ನರೇಂದ್ರ ಕುಮಾರ್, ದೈಹಿಕ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಗೋಪಾಲ್, ಸಂಸ್ಥೆಯ ಎ.ಎಸ್.ಚಂದ್ರಶೇಖರ್,ಜಿ.ಭರತ್ ರಾಜ್ ಮತ್ತಿತರರು ಹಾಜರಿದ್ದರು.

ಪ್ರತಿಕ್ರಿಯಿಸಿ (+)