ಬುಧವಾರ, ಮೇ 12, 2021
24 °C

ಗ್ರಾಮೀಣ ಜನರಿಗೆ ಕಮೋಡ್!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಗ್ರಾಮೀಣ ಜನತೆಗಾಗಿ ಆಧುನಿಕ ಕಮೋಡ್‌ಗಳನ್ನು ಹೊಂದಿರುವ ಶೌಚಾಲಯಗಳನ್ನು ನಿರ್ಮಾಣ ಮಾಡುವ ಬಗ್ಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಚಿಂತನೆ ನಡೆಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯ ತಿಳಿಸಿದರು. ಬಹುತೇಕ ಗ್ರಾಮಗಳಲ್ಲಿ ಮಕ್ಕಳಿಗೆ ಆಟದ ಮೈದಾನಗಳೇ ಇಲ್ಲ. ಜೊತೆಗೆ ರುದ್ರಭೂಮಿಗಳ ವ್ಯವಸ್ಥೆಯೂ ಸರಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತಜ್ಞರ ಸಮಿತಿ ನೀಡಿರುವ ವರದಿಯ ಆಧಾರದ ಮೇಲೆ ಇಲಾಖೆ ರೂಪಿಸುತ್ತಿರುವ ಕಾರ್ಯಸೂಚಿಯಲ್ಲಿ ಎಲ್ಲಾ ಅಂಶಗಳನ್ನು ಉಲ್ಲೇಖಿಸಲಾಗಿದೆ ಎಂದು ತಿಳಿಸಿದರು.ರಾಜ್ಯದಲ್ಲಿ ಒಟ್ಟು 20 ಸಾವಿರ ಕೆರೆಗಳಿದ್ದು, ಅವುಗಳಲ್ಲಿ 12 ಸಾವಿರ ಕೆರೆಗಳು ಬತ್ತಿಹೋಗಿವೆ. ಅವುಗಳ ಪುನಶ್ಚೇತನವಾಗಬೇಕಿದೆ. ಅದರೊಂದಿಗೆ ನೀರಿನ ಮೂಲಗಳನ್ನು ಪತ್ತೆಹಚ್ಚಿ, ನೀರಿನ ಶೇಖರಣೆಗೆ ವ್ಯವಸ್ಥೆ ಮಾಡಬೇಕಿದೆ. ಸದ್ಯದ ಪರಿಸ್ಥಿತಿಯಲ್ಲಿ ಗ್ರಾಮಗಳ ಜನರ ಅಗತ್ಯ ಹಾಗೂ ಅವಶ್ಯಕತೆಗಳಿಗೆ ತಕ್ಕಂತೆ ಗ್ರಾಮಗಳನ್ನು ಆಧುನೀಕರಣಗೊಳಿಸಲು ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಸ್ಪಷ್ಟ ನೀತಿ ಹಾಗೂ ಕಾರ್ಯಸೂಚಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.