ಗುರುವಾರ , ಜೂನ್ 17, 2021
23 °C

ಗ್ರಾಮೀಣ ಮಹಿಳೆಯರಿಗೆ ಶಿಕ್ಷಣ ಅಗತ್ಯ: ಪುಟ್ಟಬುದ್ಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: `ಗ್ರಾಮೀಣ ಪ್ರದೇಶದ ಮಹಿಳೆಯರಲ್ಲಿ ಶಿಕ್ಷಣದ ಕೊರತೆ ಇದೆ. ಅವರಿಗೆ ಶಿಕ್ಷಣ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರುವಂತೆ ಪ್ರೇರಣೆ ನೀಡಬೇಕಿದೆ~ ಎಂದು ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ ಅಧ್ಯಕ್ಷ ಬಿ.ಪಿ. ಪುಟ್ಟಬುದ್ಧಿ ಸಲಹೆ ನೀಡಿದರು.ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು.ಮಹಿಳೆ ಅಬಲೆಯಲ್ಲ. ರಾಜಕೀಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಪುರುಷರಿಗೆ ಸರಿಸಮಾನವಾಗಿ ಸ್ಪರ್ಧೆ ನೀಡುತ್ತಿರುವುದೇ ಇದಕ್ಕೆ ಸಾಕ್ಷಿ. ಗ್ರಾಮೀಣ ಮಹಿಳೆಯರು ಶಿಕ್ಷಣದಿಂದ ವಂಚಿತರಾಗಿ ಮೂಢನಂಬಿಕೆಗೆ ತುತ್ತಾ ಗುತ್ತಿದ್ದಾರೆ. ಸಂಕುಚಿತ ಮತ್ತು ಸಂಘ ಟಿತ ಮನೋಭಾವದ ಕೊರತೆ ಯಿಂದ ಹಿಂದುಳಿದಿದ್ದಾರೆ ಎಂದು ಹೇಳಿದರು.ವೈಯಕ್ತಿಕ ಶೌಚಾಲಯ ನಿರ್ಮಾ ಣಕ್ಕೆ ಪ್ರೋತ್ಸಾಹಧನ ನೀಡಲಾಗುತ್ತಿದೆ. ಹಳ್ಳಿಗಳಲ್ಲಿ ಶೌಚಾಲಯ ನಿರ್ಮಿಸಿ ಕೊಳ್ಳಲು ಮಹಿಳೆಯರು ಮುಂದಾಗ ಬೇಕು. ಸರ್ಕಾರದಿಂದ ಕಲ್ಪಿಸಿರುವ ಸಲ ವತ್ತು ಬಳಸಿಕೊಂಡು ಸ್ವಾವಲಂಬನೆ ಸಾಧಿಸಬೇಕು ಎಂದು ಸಲಹೆ ನೀಡಿದರು.ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ. ರಾಜೇಶ್ವರಿ ಮಾತನಾಡಿ, `ಈ ಹಿಂದೆ ಶೋಷಣೆ ಮತ್ತು ಕಂದಾಚಾರಕ್ಕೆ ಮಹಿಳೆಯರು ಹೆಚ್ಚಾಗಿ ಬಲಿಯಾ ಗುತ್ತಿದ್ದರು. ಆಧುನಿಕಯುಗದಲ್ಲಿ ಕಟ್ಟುಪಾಡುಗಳಿಂದ ಹೊರಬಂದು ಎಲ್ಲ ರಂಗಗಳಲ್ಲೂ ಮೆಲುಗೈ ಸಾಧಿಸಿರುವುದು ಶ್ಲಾಘನೀಯ~ ಎಂದರು.ಜಿ.ಪಂ. ಸದಸ್ಯೆ ಜಿ. ನಾಗಶ್ರೀ ಮಾತನಾಡಿ, `ಹೆಣ್ಣುಮಕ್ಕಳ ಹಕ್ಕುಗಳು ಪುಸ್ತಕಕ್ಕೆ ಮಾತ್ರ ಸೀಮಿತವಾಗಿವೆ. ಈ ಸಂಬಂಧ  ಮಹಿಳೆಯರು ಸಂಘಟಿತರಾಗಿ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು~ ಎಂದು ಸಲಹೆ ನೀಡಿದರು.

ಪುರುಷರು ಮಹಿಳೆಯರನ್ನು ನೋಡುವ ದೃಷ್ಟಿ ಬದಲಾಗಬೇಕು.

 

ಮಹಿಳೆಯರಿಗೆ ಸ್ವಾತಂತ್ರ್ಯ ಮತ್ತು ಜವಾಬ್ದಾರಿ ಎಂಬುದು ಒಂದೇ ನಾಣ್ಯದ ಎರಡು ಮುಖವಿದ್ದಂತೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಸಶಕ್ತರಾಗಬೇಕು. ಇದಕ್ಕೆ ಪುರುಷರ ಸಹಕಾರ ಅಗತ್ಯ. ಮಹಿಳಾ ಸಂಘ-ಸಂಸ್ಥೆಗಳು ವ್ಯವಹಾರಕ್ಕೆ ಸೀಮಿತವಾಗಬಾರದು. ಮಹಿಳೆಯರ ಸ್ವಾವಲಂಬನೆಗೆ ಪ್ರೋತ್ಸಾಹ ನೀಡಬೇಕು ಎಂದರು.`ಅಂಗನವಾಡಿ ಕಾರ್ಯಕರ್ತೆಯರಿಂದ ಮಹಿಳಾ ಸ್ವಸಹಾಯ ಸಂಘಗಳು ಶಕ್ತಿಯುತವಾಗಿವೆ. ಬಾಲ್ಯವಿವಾಹ, ಹೆಣ್ಣು ಭ್ರೂಣಹತ್ಯೆ ಸೇರಿದಂತೆ ಅನೇಕ ಸಾಮಾಜಿಕ ಪಿಡುಗು ತಡೆಗಟ್ಟುವಲ್ಲಿ ಯಶಸ್ವಿಯಾಗುತ್ತಿವೆ. ಗ್ರಾಮೀಣ ಮಹಿಳೆಯರು ಉನ್ನತ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು~ ಎಂದು ಜಿ.ಪಂ. ಸದಸ್ಯೆ ಕೇತಮ್ಮ ಆಶಿಸಿದರು. ಸಮಾರಂಭದಲ್ಲಿ ವಿದುಷಿ ರುಕ್ಮಿಣಮ್ಮ ಅವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಶೇಹೆರ್‌ಬಾನು, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಚ್.ಕೆ. ರೇವಣೇಶ್, ತಾ.ಪಂ. ಅಧ್ಯಕ್ಷೆ ಮಹಾದೇವಿ, ನಗರಸಭೆ ಅಧ್ಯಕ್ಷೆ ಭಾಗ್ಯಮ್ಮ, ಉಪಾಧ್ಯಕ್ಷೆ ಸೆಲ್ವಿಬಾಬು, ಸದಸ್ಯೆ ಮಂಜುಳಾ, ತಾ.ಪಂ. ಸದಸ್ಯ ಬಸವಣ್ಣ, ರತ್ನಮ್ಮ, ಜಿ.ಪಂ. ಸದಸ್ಯರಾದ ದೇವಮ್ಮಣ್ಣಿ, ಲಕ್ಷ್ಮೀ ಇತರರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.