ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ

7

ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ

Published:
Updated:

ಬೆಂಗಳೂರು: ಗ್ರಾಮೀಣ ಅಭಿವೃದ್ಧಿ ಕ್ಷೇತ್ರಕ್ಕೆ ಈ ಬಜೆಟ್‌ನಲ್ಲಿ 943 ಕೋಟಿ ರೂಪಾಯಿ ಹೆಚ್ಚಿನ ಅನುದಾನ ದೊರೆತಿದೆ. 2011-12ರ ಬಜೆಟ್‌ನಲ್ಲಿ ಈ ಕ್ಷೇತ್ರಕ್ಕೆ ರೂ 4,385 ಕೋಟಿ ನೀಡಲಾಗಿದೆ. 2010-11ರ ಬಜೆಟ್‌ನಲ್ಲಿ ಈ ಕ್ಷೇತ್ರಕ್ಕೆ ರೂ 3,442 ಕೋಟಿ ಅನುದಾನ ನೀಡಲಾಗಿತ್ತು.ಕುಡಿಯುವ ನೀರು, ಉದ್ಯೋಗ ಸೃಷ್ಟಿ, ಗ್ರಾಮೀಣ ರಸ್ತೆ ಸಂಪರ್ಕ ಮತ್ತಿತರ ಯೋಜನೆಗಳಿಗೆ ಕೇಂದ್ರ ಸರ್ಕಾರ ನೀಡುವ ಅನುದಾನವನ್ನು ಸೇರಿಸಿದರೆ 2011-12ನೇ ಸಾಲಿನಲ್ಲಿ ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ 8,500 ಕೋಟಿ ವೆಚ್ಚ ಮಾಡುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ರೂ 1,000 ಕೋಟಿ ಮತ್ತು ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ ರೂ 1,250 ಕೋಟಿ ಮೀಸಲಿಡಲಾಗಿದೆ.ಮಾದರಿ ರಸ್ತೆ: ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಮಾದರಿ ರಸ್ತೆಗಳನ್ನು ನಿರ್ಮಿಸಲು ಹೊಸ ಕಾರ್ಯಕ್ರಮ ಪ್ರಕಟಿಸಲಾಗಿದೆ. ಈ ಯೋಜನೆಯಡಿ ಗ್ರಾಮೀಣ ಪ್ರದೇಶದ 189 ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 20 ಕಿ.ಮೀ. ಉದ್ದದ ರಸ್ತೆಯನ್ನು ಏಕರೂಪವಾಗಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ.ಗೌರವಧನ ಹೆಚ್ಚಳ: ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಮಾಸಿಕ ಗೌರವ ಧನ ಹೆಚ್ಚಳ ಮಾಡುವ ಮಹತ್ವದ ನಿರ್ಧಾರವನ್ನು ಸರ್ಕಾರ ಬಜೆಟ್‌ನಲ್ಲಿ ಪ್ರಕಟಿಸಿದೆ. ಗ್ರಾಮ ಪಂಚಾಯಿತಿಗಳಿಗೆ ನೀಡುತ್ತಿರುವ ವಾರ್ಷಿಕ ಅನುದಾನದ ಮೊತ್ತವನ್ನು ರೂ 6 ಲಕ್ಷದಿಂದ ರೂ 8 ಲಕ್ಷಕ್ಕೆ ಹೆಚ್ಚಿಸುವ ಮತ್ತು ಪ್ರತಿ ತಾಲ್ಲೂಕು ಪಂಚಾಯಿತಿಗೆ ವಾರ್ಷಿಕ ರೂ 1 ಕೋಟಿ ಅನಿರ್ಬಂಧಿತ ಅನುದಾನ ಒದಗಿಸುವ ತೀರ್ಮಾನವನ್ನೂ ಪ್ರಕಟಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry