ಬೆಂಗಳೂರು: ಕೇಂದ್ರ ಸರ್ಕಾರ ಮೂರು ವರ್ಷಗಳ ಬಳಿಕ ಪ್ರಧಾನಮಂತ್ರಿ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಯಡಿ (ಪಿಎಂಜಿಎಸ್ವೈ) ರಾಜ್ಯಕ್ಕೆ ಅನುದಾನ ನೀಡಲು ಸಮ್ಮತಿಸಿದೆ. ರಾಜ್ಯದ 2,245 ಕಿ.ಮೀ ಗ್ರಾಮೀಣ ರಸ್ತೆಗಳನ್ನು ₨1,033 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಹಸಿರು ನಿಶಾನೆ ಸಿಕ್ಕಿದೆ.

ಈ ವಿಷಯವನ್ನು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಯಾವ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು ಎನ್ನುವುದನ್ನು ಗುರುತಿಸಲಾಗಿದೆ. ಒಂಬತ್ತು ತಿಂಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳ್ಳಲಿದೆ. ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳನ್ನು ಅಭಿವೃದ್ಧಿಪಡಿಸುವುದು ಈ ಯೋಜನೆಯ ಉದ್ದೇಶ ಎಂದರು.

ಶಾಸಕರ ಸಲಹೆಗೆ ಮಾನ್ಯತೆ: ಗುಣಮಟ್ಟದ ವಿಷಯದಲ್ಲಿ ರಾಜಿ ಇಲ್ಲ. ಶಾಸಕರ ಸಲಹೆ ಮತ್ತು ಸ್ಥಳೀಯ ಅಗತ್ಯವನ್ನು ಪರಿಗಣಿಸಿ, ರಸ್ತೆಗಳ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗುವುದು. ಕಾಮಗಾರಿ ಮುಗಿದ ನಂತರ ಅವುಗಳನ್ನು ಜಿಲ್ಲಾ ಮುಖ್ಯ ರಸ್ತೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಅವರು ಹೇಳಿದರು.

ಪಿಎಂಜಿಎಸ್ವೈ ಯೋಜನೆಯ ರಸ್ತೆಗಳಿಗೆ ಶೇ 75ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ನೀಡಿದರೆ, ಉಳಿದ ಶೇ 25ರಷ್ಟನ್ನು ರಾಜ್ಯ ಸರ್ಕಾರ ಭರಿಸಲಿದೆ .

ಮರಳುಗಾಡು ಅಭಿವೃದ್ಧಿ ಯೋಜನೆಯಡಿ 250ಕ್ಕಿಂತ ಹೆಚ್ಚು ಜನಸಂಖ್ಯೆ ಇರುವ 16 ಜನವಸತಿ ಕೇಂದ್ರಗಳಿಗೆ ಸಂಪರ್ಕ ಕಲ್ಪಿಸಲು ₨ 21.71 ಕೋಟಿ ವೆಚ್ಚದಲ್ಲಿ 48.38 ಕಿ.ಮೀ ರಸ್ತೆ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ ಎಂದು ಅವರು ಹೇಳಿದರು. 500ಕ್ಕಿಂತ ಹೆಚ್ಚು ಜನಸಂಖ್ಯೆಯ 12 ಜನವಸತಿಗಳಿಗೆ 43.86 ಕಿ.ಮೀ ಉದ್ದದ ರಸ್ತೆ ಸಂಪರ್ಕ ಕಲ್ಪಿಸಲು ₨ 18.58 ಕೋಟಿ ಬಿಡುಗಡೆ ಮಾಡಿದೆ ಎಂದರು.

ಪಿಎಂಜಿಎಸ್ವೈ ಅಡಿ ಇದುವರೆಗೂ 10 ಹಂತದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಮಂಜೂರಾತಿ ಸಿಕ್ಕಿದ್ದ 16,267 ಕಿ.ಮೀ ರಸ್ತೆಯಲ್ಲಿ 16,058 ಕಿ.ಮೀ ಅಭಿವೃದ್ಧಿಪಡಿಸಲಾಗಿದೆ. ಒಟ್ಟು ₨ 3,642 ಕೋಟಿ ವೆಚ್ಚವಾಗಿದೆ ಎಂದರು.

ಹಳ್ಳಿ ರಸ್ತೆ ದುರಸ್ತಿ
ಗ್ರಾಮೀಣ ಭಾಗದಲ್ಲಿ 1.55 ಲಕ್ಷ ಕಿ.ಮೀ. ಉದ್ದದ ರಸ್ತೆಗಳಿದ್ದು, ಅವುಗಳ ದುರಸ್ತಿಗೆ ರಾಜ್ಯ ಸರ್ಕಾರ ₨ 109 ಕೋಟಿ ಬಿಡುಗಡೆ ಮಾಡಿದೆ. ಶಾಸಕರ ಅಧ್ಯಕ್ಷತೆಯ ಕಾರ್ಯಪಡೆ ರಸ್ತೆಗಳನ್ನು ಆಯ್ಕೆ ಮಾಡಲಿದೆ.

ಒಂದು ಕಿ.ಮೀ ಮಣ್ಣಿನ ರಸ್ತೆ ದುರಸ್ತಿಗೆ ₨ 5,000, ಜಲ್ಲಿ ರಸ್ತೆಗೆ ₨6,000 ಮತ್ತು ಡಾಂಬರು ರಸ್ತೆಗೆ ₨ 10 ಸಾವಿರ ನೀಡಲು ಅವಕಾಶ ಇದೆ. ಈ ಹಣದಲ್ಲೇ ರಸ್ತೆಗಳಲ್ಲಿನ ಗುಂಡಿ ಮುಚ್ಚುವುದಕ್ಕೂ ಬಳಕೆ ಮಾಡಿಕೊಳ್ಳಬಹುದು. ಪ್ರತಿ ಒಂದು ವಿಧಾನಸಭಾ ಕ್ಷೇತ್ರಕ್ಕೆ ಸರಾಸರಿ ₨ 55 ರಿಂದ 60 ಲಕ್ಷ ಲಭ್ಯವಾಗಲಿದೆ ಎಂದು ಪಾಟೀಲ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.