ಶುಕ್ರವಾರ, ಮೇ 14, 2021
32 °C

ಗ್ರಾಮೀಣ ರಸ್ತೆ ಪುನರ್ ನಿರ್ಮಾಣಕ್ಕೆ 25 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತರೀಕೆರೆ: ಇತ್ತೀಚೆಗೆ ಮಳೆಯಿಂದಾಗಿ ಹಾನಿ ಗೊಳಗಾಗಿರುವ ತಾಲ್ಲೂಕಿನ ಗ್ರಾಮೀಣ ರಸ್ತೆಗಳ ಪುನರ್ ನಿರ್ಮಾಣಕ್ಕೆ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ರೂ.25 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ ಎಂದು ಶಾಸಕ ಡಿ.ಎಸ್.ಸುರೇಶ್ ಹೇಳಿದರು.ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿದ ನಂತರ ಎಪಿಎಂಸಿ ಉಪ ಮಾರುಕಟ್ಟೆಯಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.ಲಿಂಗದಹಳ್ಳಿ ಗ್ರಾಮಕ್ಕೆ ನೀರಾವರಿ ಸೌಲಭ್ಯ ಮತ್ತು ಅಂತರ ಜಲವನ್ನು ಹೆಚ್ಚಿಸುವ ಅರಸೀಕೆರೆಯ ಅಭಿವೃದ್ಧಿಗೆ ರೂ 2.20 ಕೋಟಿ ಹಣವನ್ನು ನೀಡಲಾಗಿದ್ದು, ಶೇ. 75ರಷ್ಟು ಕಾಮಗಾರಿ ಮುಕ್ತಾಯಗೊಂಡಿದೆ. ರೂ. 18 ಲಕ್ಷ ಹಣದಲ್ಲಿ ಲಿಂಗದಹಳ್ಳಿ ಗ್ರಾಮದ ಎಲ್ಲಾ ಕುಡಿಯುವ ನೀರಿನ ಕೊಳವೆಯನ್ನು ನೂತನವಾಗಿ ಅಳವಡಿಸಲಾಗಿದೆ.ಕೆಮ್ಮಣ್ಣುಗುಂಡಿ ಪ್ರವಾಸಿ ಕೇಂದ್ರವನ್ನು ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ನೀಡಿರುವ ರೂ 56 ಕೋಟಿ ಹಣದಲ್ಲಿ ಕಾಮಗಾರಿ ನಡೆಯುತ್ತಿದೆ ಎಂದರು.ವಿದರ್ಭ ಪ್ಯಾಕೇಜ್ ಅಡಿಯಲ್ಲಿ 8 ಜನ ಫಲಾನುಭವಿಗಳಿಗೆ ರಾಸುಗಳನ್ನು ಕೊಳ್ಳಲು ಧನ ಸಹಾಯದ ಚೆಕ್ ಮತ್ತು ಬಗರ್‌ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿಯನ್ನು ವಿತರಿಸಲಾಯಿತು.ಜಿಲ್ಲಾ ಪಂಚಾಯಿತಿ ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಆರ್.ದ್ರುವಕುಮಾರ್ ಸದಸ್ಯರಾದ ಹೇಮಾವತಿ ಕೃಷ್ಣಪ್ಪ, ಶಂಬೈನೂರು ಆನಂದಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಆರ್.ರವಿ ಸದಸ್ಯೆ ಲತಾ ತಮ್ಮಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯರಾಂ ಶ್ರೀನಿವಾಸ್ ಮಾತನಾಡಿದರು.ಜಿಲ್ಲಾ ಪಶುವೈದ್ಯಕೀಯ ಸಹಾಯಕ ನಿರ್ದೇಶಕ ಡಾ.ನಾಗೇಂದ್ರ, ತಾಲ್ಲೂಕು ನಿರ್ದೇ ಶಕ ಡಾ.ಕೊಟ್ರಯ್ಯ, ಎಪಿಎಂಸಿ ಅಧ್ಯಕ್ಷ ಶಂಕರಲಿಂಗಪ್ಪ, ಕಾರ್ಯದರ್ಶಿ ನರಸಿಂಹಮೂರ್ತಿ ಇದ್ದರು.ವಿದ್ಯುತ್ ಶಿಲ್ಪಿ ಅರ್ಜಿ ಆಹ್ವಾನ

ಚಿಕ್ಕಮಗಳೂರು: ತರೀಕೆರೆ ತಾಲ್ಲೂಕು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿದ್ಯುತ್ ಶಿಲ್ಪಿ ಹಾಗೂ ಸಿಒಪಿಎ (ಕೊಪಾ) ಸ್ಥಾನಗಳನ್ನು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಅರ್ಜಿ ಶುಲ್ಕ 20 ರೂಪಾಯಿ. ಅರ್ಜಿ ಸಲ್ಲಿಸಲು ಇದೇ 29 ಕೊನೆ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಪ್ರಾಚಾರ್ಯರು, ಕೈಗಾರಿಕಾ ತರಬೇತಿ ಸಂಸ್ಥೆ, ತರೀಕೆರೆ ಅಥವಾ ದೂರವಾಣಿ 08261-222753 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.