ಶುಕ್ರವಾರ, ಮೇ 14, 2021
32 °C

ಗ್ರಾಮೀಣ ವಿದ್ಯಾರ್ಥಿಗಳಿಗೆ ಅಪಾರ ಸಾಮರ್ಥ್ಯ: ಡಾ.ಚಿದಾನಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಂತೇಬೆನ್ನೂರು: ಗ್ರಾಮೀಣ ವಿದ್ಯಾರ್ಥಿಗಳಿಗೆ ಅಪಾರ ಸಾಮರ್ಥ್ಯವಿದೆ. ಪಠ್ಯ, ಕ್ರೀಡೆ, ಸೇವೆಗಳಲ್ಲಿ ಅವುಗಳನ್ನು ಸಾಧಿಸಿದ್ದೀರಿ. ಇವುಗಳು ಬೇರೆಯಲ್ಲ ಒಂದೇ ಆಗಿವೆ ಎಂದು ಚನ್ನಗಿರಿ ಶ್ರೀ ಶಿವಲಿಂಗೇಶ್ವರ ಪ್ರಥಮದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಚಿದಾನಂದ್ ಅಭಿಪ್ರಾಯಪಟ್ಟರು.ಇಲ್ಲಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸ್ವಯಂ ಸೇವಾ ಯೋಜನೆ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.ವ್ಯವಸ್ಥೆಯನ್ನು ದೂರುವುದರಿಂದ ಅಭಿವೃದ್ಧಿ ಸಾಧ್ಯವಿಲ್ಲ. ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುವ ಛಲವಿರಬೇಕು ಎಂದು ತಿಳಿಸಿದರು.ಜಿ.ಪಂ. ಉಪಾಧ್ಯಕ್ಷೆ ಪ್ರೇಮಾ ಸಿದ್ದೇಶ್ ಮಾತನಾಡಿ, ಕಾಲೇಜಿನ ಕಡಿಮೆ ಅವಧಿಯಲ್ಲಿ ಹೆಚ್ಚು ಸಾಧನೆ ಮಾಡಿರುವುದು ಶ್ಲಾಘನೀಯ ಎಂದರು.ಅಧ್ಯಕ್ಷತೆಯನ್ನು ಪ್ರಾಂಶುಪಾಲ ಜಯಾನಾಯ್ಕ ವಹಿಸಿದ್ದರು.ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಿ. ವಾಗೀಶ್, ಕಸಾಪ ಮಾಜಿ ಅಧ್ಯಕ್ಷ ಕೆ. ಸಿದ್ದಲಿಂಗಪ್ಪ ಮಾತನಾಡಿದರು. ಮುಖ್ಯ ಶಿಕ್ಷಕ ಹನುಮಂತರಾಯಪ್ಪ, ಸಹಾಯಕ ಸಬ್‌ಇನ್ಸ್‌ಪೆಕ್ಟರ್ ಮಂಜನಾಥ್ ಭಾಗವಹಿಸಿದ್ದರು.ವಿಶ್ವವಿದ್ಯಾಲಯ ಹಾಗೂ ಅಂತರ ವಿಶ್ವವಿದ್ಯಾಲಯ ಹಂತದಲ್ಲಿ ವಿವಿಧ ಸ್ಪರ್ಧೆಯಲ್ಲಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.2010-11ನೇ ಸಾಲಿನಲ್ಲಿ ತೃತೀಯ ಬಿ.ಎ. ಪರೀಕ್ಷೆಯಲ್ಲಿ 5ನೇ ರ‌್ಯಾಂಕ್ ಪಡೆದ ಕೆ.ಎಚ್. ವಿನುತಾ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಿಕೊಟ್ಟರು. ಮಾರುತಿ ಪ್ರಾರ್ಥಿಸಿದರು. ಪ್ರಾಧ್ಯಾಪಕ ಪಿ. ನಾಗೇಶ್ ಸ್ವಾಗತಿಸಿದರು. ಡಾ.ರಾಜ್‌ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.