ಹೊಸಕೋಟೆ: `ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣಕ್ಕಾಗಿ ಬಜೆಟ್ನಲ್ಲಿ ಸಾಕಷ್ಟು ಹಣ ಮೀಸಲಿಟ್ಟರೂ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯದ ಕೊರತೆಯನ್ನು ಸಂಪೂರ್ಣವಾಗಿ ನೀಗಿಸಲು ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಅಗತ್ಯ ಸೌಲಭ್ಯ ಕಲ್ಪಿಸುವುದರ ಮೂಲಕ ಬಡ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು' ಎಂದು ಶಾಸಕ ಎನ್.ನಾಗರಾಜು ಸಲಹೆ ನೀಡಿದರು.

ಪಟ್ಟಣದ ಬಾಲಕರ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸೋಮವಾರ ಬೆಂಗಳೂರಿನ ಸಂಗಿನಿ ಜೈನ್ ಮಹಾಮಂಡಳಿ, ಪಟ್ಟಣದ ಜೈನ್ ಸಂಘದ ಆಶ್ರಯದಲ್ಲಿ ಶಾಲಾ ಮಕ್ಕಳಿಗೆ ಏರ್ಪಡಿಸಿದ್ದ ಉಚಿತ ನೋಟ್ ಪುಸ್ತಕ ವಿತರಣಾ, ನೈತಿಕ ಶಿಕ್ಷಣ ಬೋಧನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಗನಿ ಜೈನ್ಸಂಘದ ಅಧ್ಯಕ್ಷೆ ಚಂದ್ರ, `ಈ ಸಾಲಿನಲ್ಲಿ ತಾಲ್ಲೂಕಿನ 6 ಸರ್ಕಾರಿ ಶಾಲೆಗಳ 1,777 ಮಕ್ಕಳಿಗೆ ನೋಟ್ಪುಸ್ತಕ ನೀಡಲಾಗುವುದು' ಎಂದರು.

ಸಾಧ್ವಿ ಕುಂತುಶ್ರೀ ಮಾತನಾಡಿ, `ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಾಗಿ ಆದರ್ಶ ಜೀವನ ನಡೆಸಲು ಪೋಷಕರು ಹಾಗೂ ಶಿಕ್ಷಕರು ಪ್ರಮುಖ ಪಾತ್ರ ವಹಿಸಬೇಕು' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.