`ಗ್ರಾಮ ಅಭಿವೃದ್ಧಿಗೆ ಆದ್ಯತೆ'

7

`ಗ್ರಾಮ ಅಭಿವೃದ್ಧಿಗೆ ಆದ್ಯತೆ'

Published:
Updated:

ಲಿಂಗಸುಗೂರ(ಮುದಗಲ್ಲ): ತಾಲ್ಲೂಕಿನ ಲಿಂಗಸುಗೂರ ಕ್ಷೇತ್ರ ವ್ಯಾಪ್ತಿಯ ಗಡಿ ಭಾಗದ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರು, ರಸ್ತೆ, ವಿದ್ಯುತ್, ಶೈಕ್ಷಣಿಕ ಸೌಲಭ್ಯ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ಮಾನಪ್ಪ ವಜ್ಜಲ ಅಭಿಮತ ವ್ಯಕ್ತಪಡಿಸಿದರು.ಬುಧವಾರ ಹಲ್ಕಾವಟಗಿ ಗ್ರಾಮದಲ್ಲಿ ಮುಖ್ಯರಸ್ತೆಯಿಂದ ಅಂಕನಾಳ-ಉಪನಾಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ರಸ್ತೆ ಅಭಿವೃದ್ಧಿಗೆ ರೂ. 1.20ಕೋಟಿ ಅನುದಾನ ನೀಡಲಾಗಿದೆ. ಗುತ್ತಿಗೆದಾರರು ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳಬೇಕು. ಸಾರ್ವಜನಿಕರು ಕೂಡ ಅಭಿವೃದ್ಧಿ ಕಾಮಗಾರಿಗಳಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಂಕರಮ್ಮ ಪವಾಡೆಪ್ಪ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಮಾನಪ್ಪ ಚವ್ಹಾಣ. ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪಾಮಯ್ಯ ಮುರಾರಿ. ಎಪಿಎಂಸಿ ನಿರ್ದೇಶಕ ಬಸಣ್ಣ ಮೇಟಿ. ವಿಎಸ್‌ಎಸ್‌ಎನ್ ಅಧ್ಯಕ್ಷ ವೀರನಗೌಡ ಲೆಕ್ಕಿಹಾಳ.ಮುಖಂಡರಾದ ಮಲ್ಲಪ್ಪ ಭಗವತಿ, ಹೊನ್ನಪ್ಪ ಮೇಟಿ, ಮಹಾಂತಗೌಡ ಬಯ್ಯಾಪೂರ, ಗೋವಿಂದ ನಾಯಕ. ಲೊಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಹಾಂತಪ್ಪ ಕಣ್ಣೂರು ಸೇರಿದಂತೆ ಗಣ್ಯರು ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry