ಮಂಗಳವಾರ, ಮೇ 18, 2021
30 °C

ಗ್ರಾಮ ಪಂಚಾಯಿತಿಗೂ ವಾರ್ಡ್ ಸೌಲಭ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗ್ರಾಮ ಪಂಚಾಯಿತಿಗೂ ವಾರ್ಡ್ ಸೌಲಭ್ಯ

ಮಹದೇವಪುರ: ಕ್ಷೇತ್ರದಲ್ಲಿ ಮಹಾನಗರ ಪಾಲಿಕೆಯ ವಾರ್ಡ್‌ಗಳ ಅಭಿವೃದ್ಧಿಗೆ ನೀಡುವಂತಹ ಪ್ರಾಮುಖ್ಯತೆಯನ್ನು ಗ್ರಾಮ ಪಂಚಾಯಿತಿಗಳಿಗೂ ನೀಡಲಾಗುವುದು ಎಂದು ಶಾಸಕ ಅರವಿಂದ ಲಿಂಬಾವಳಿ ಭರವಸೆ ನೀಡಿದರು.ಸಮೀಪದ ಹಾಲನಾಯಕನಹಳ್ಳಿಯಲ್ಲಿ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್ ಕಾರ್ಯಕರ್ತರನ್ನು ಬರಮಾಡಿಕೊಂಡ ಮಾತನಾಡಿದರು. ` ಕೊಡತಿ, ಬಿದರಹಳ್ಳಿ, ದೊಡ್ಡಬನ್ನಹಳ್ಳಿ ಸೇರಿದಂತೆ ಹಲವು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಶಾಸಕರ ಅನುದಾನದಲ್ಲಿ ಸ್ತ್ರೀಶಕ್ತಿ ಭವನ, ಸಮುದಾಯ ಭವನ ನಿರ್ಮಿಸಲಾಗಿದೆ~ ಎಂದರು.`ಹಾಲನಾಯಕನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರ ಅನುದಾನದಡಿ ರೂ 50 ಲಕ್ಷ ನೀಡಲಾಗಿದೆ~ ಎಂದರು.ಕ್ಷೇತ್ರದ ಬಿಜೆಪಿ ಘಟಕದ ಅಧ್ಯಕ್ಷ ಜಯಚಂದ್ರರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಆರಾಧನಾ ಸಮಿತಿ ಅಧ್ಯಕ್ಷ ಮನೋಹರರೆಡ್ಡಿ, ರಮೇಶರೆಡ್ಡಿ ಹಾಗೂ ವೇಣುಗೋಪಾಲರೆಡ್ಡಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ  ಕೈಕೊಂಡರಹಳ್ಳಿ, ಕಸವನಹಳ್ಳಿ, ಜುನ್ನಸಂದ್ರ ಗ್ರಾಮಗಳ ಹಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.