ಸೋಮವಾರ, ಮೇ 17, 2021
22 °C

ಗ್ರಾಮ ಪಂಚಾಯ್ತಿಗಳ ಪುನರ್‌ವಿಂಗಡಣೆ: ಶೆಟ್ಟರ ಪ್ರಕಟಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ರಾಜ್ಯದಲ್ಲಿ ಶೀಘ್ರವೇ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯ ಪುನರ್‌ವಿಂಗಡಣೆ ಕಾರ್ಯ ನಡೆಯಲಿದ್ದು, ದೊಡ್ಡ ಗ್ರಾಮಗಳು ಗ್ರಾಮ ಪಂಚಾಯ್ತಿಗಳಾಗಿ ಹಾಗೂ ದೊಡ್ಡ ಗ್ರಾಮ ಪಂಚಾಯ್ತಿಗಳು ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೆ ಏರಲಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಜಗದೀಶ್ ಶೆಟ್ಟರ್ ಪ್ರಕಟಿಸಿದರು.ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಗ್ರಾಮದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಸೂಳೆಕೆರೆಯಿಂದ ಸಂತೇಬೆನ್ನೂರು ಸೇರಿದಂತೆ ವಿವಿಧ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಯೋಜನೆ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಅವರು ಮಾತನಾಡಿದರು.ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎ. ರವೀಂದ್ರನಾಥ್, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತಿತರರು ಹಾಜರಿದ್ದರು. ರಸ್ತೆ ಸುಧಾರಣೆ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿದ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿಯಲ್ಲಿ 2 ವರ್ಷದಿಂದ ರಾಜ್ಯಕ್ಕೆ ಬಿಡಿಗಾಸು ದೊರೆತಿಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.ಈ ಕುರಿತು ಕೇಂದ್ರದ ಗಮನಕ್ಕೆ ತರಲಾಗಿದೆ. 2ರಿಂದ 3 ಸಾವಿರ ಕಿ.ಮೀ. ರಸ್ತೆ ಯೋಜನೆಯನ್ನು ಕೇಂದ್ರ ಸರ್ಕಾರ ಕೊಟ್ಟರೆ, ಗ್ರಾಮೀಣ ರಸ್ತೆಗಳ ಸ್ಥಿತಿ ಸುಧಾರಿಸುತ್ತದೆ.ಏ. 25ರಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಜೈರಾಂ ರಮೇಶ್ ಅವರೊಂದಿಗೆ ಸಭೆ ನಡೆಯಲಿದೆ. ಅನುದಾನ ದೊರೆಯುವ ನಿರೀಕ್ಷೆ ಇದೆ ಎಂದರು.ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎ. ರವೀಂದ್ರನಾಥ್, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತಿತರರು ಹಾಜರಿದ್ದರು. 2 ವರ್ಷದಿಂದ ಪಿಎಂಜಿಎಸ್‌ವೈ ಹಣ ಬಂದಿಲ್ಲ!

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.