ಬೆಂಗಳೂರು: ರಾಜ್ಯದ ವಿವಿಧ ಗ್ರಾಮ ಪಂಚಾಯ್ತಿಗಳು ವಿದ್ಯುತ್ ಸರಬರಾಜು ಕಂಪೆನಿಗಳಿಗೆ (ಎಸ್ಕಾಂ) 2,684 ಕೋಟಿ ರೂಪಾಯಿ ವಿದ್ಯುತ್ ಶುಲ್ಕ ಬಾಕಿ ಪಾವತಿಸಬೇಕಿದ್ದು, ಈ ಹೊರೆಯನ್ನು ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ ಭರವಸೆ ನೀಡಿದರು.

ವಿಧಾನ ಪರಿಷತ್ನಲ್ಲಿ ಗುರುವಾರ ಪಂಚಾಯತ್ ರಾಜ್ ಸಂಸ್ಥೆಗಳ ಬಲವರ್ಧನೆ ಕುರಿತು ನಿಯಮ 330ರ ಅಡಿಯಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ಸಚಿವರು, `ಹಿಂದೆ ಒಂದು ಬಾರಿ ಗ್ರಾಮ ಪಂಚಾಯ್ತಿಗಳು ಉಳಿಸಿಕೊಂಡಿದ್ದ 1,400 ಕೋಟಿ ರೂಪಾಯಿ ವಿದ್ಯುತ್ ಶುಲ್ಕ ಬಾಕಿಯನ್ನು ಸರ್ಕಾರವೇ ಸಂದಾಯ ಮಾಡಿತ್ತು. ಈಗ ಕೇಂದ್ರ ಸರ್ಕಾರದ ಅನುದಾನ ಪಡೆದು ಅಥವಾ ರಾಜ್ಯ ಸರ್ಕಾರದಿಂದ ನೇರವಾಗಿ ಬಾಕಿ ಮೊತ್ತವನ್ನು ಪಾವತಿಸುವ ಕುರಿತು ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು' ಎಂದು ತಿಳಿಸಿದರು.

ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗೆ ಸರ್ಕಾರ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಿದೆ. ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಲ್ಲಿ ಶೇಕಡಾ 50ರಷ್ಟು ಖಾಲಿ ಇವೆ. ಈ ಹುದ್ದೆಗಳ ಭರ್ತಿಗೆ ಸೂಕ್ತಕ್ರಮ ಜರುಗಿಸಲಾಗುವುದು. ಸಚಿವರು ಖುದ್ದಾಗಿ ಗ್ರಾಮಸಭೆಗಳಲ್ಲಿ ಭಾಗವಹಿಸಬೇಕೆಂಬ ಬೇಡಿಕೆ ಇದೆ. ಈ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದರು.

ರಾಜ್ಯ ಪಂಚಾಯತ್ ಪರಿಷತ್ ಸಕ್ರಿಯವಾಗಿ ಕೆಲಸ ಮಾಡುತ್ತಿಲ್ಲ. ಕಾನೂನಿನ ಪ್ರಕಾರ ಪರಿಷತ್ನ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗಿದೆ. ಸದಸ್ಯರ ನೇಮಕ ತೀರ್ಮಾನವನ್ನೂ ತ್ವರಿತವಾಗಿ ತೆಗೆದುಕೊಳ್ಳುವಂತೆ ಕೋರಲಾಗಿದೆ. ಒಂದು ತಿಂಗಳೊಳಗೆ ಪಂಚಾಯತ್ ಪರಿಷತ್ ಸಕ್ರಿಯವಾಗಿ ಕೆಲಸ ಮಾಡಲಿದೆ ಎಂದು ಪಾಟೀಲ ತಿಳಿಸಿದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನ ಹೆಚ್ಚಳ ಕುರಿತು ಮುಖ್ಯಮಂತ್ರಿಯವರ ಜೊತೆ ಚರ್ಚಿಸಲಾಗುವುದು. ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಮಾನ ಹೆಚ್ಚಿಸುವ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಬಲವರ್ಧನೆಗೆ ಆಗ್ರಹ: ವಿಷಯ ಪ್ರಸ್ತಾಪಿಸಿ ಮಾತನಾಡಿದ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, `ವಿಕೇಂದ್ರೀಕರಣದ ಹೆಸರಿನಲ್ಲಿ ಜಾರಿಗೆ ಬಂದ ಮೂರು ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಹಲ್ಲಿಲ್ಲದ ಹಾವಿನಂತಾಗಿದ್ದು, ಅದರ ಶಾಸನಬದ್ಧ ಹಕ್ಕುಗಳ ರಕ್ಷಣೆ ಆಗುತ್ತಿಲ್ಲ' ಎಂದು ದೂರಿದರು.

`ಅಭಿವೃದ್ಧಿ ಕಾರ್ಯದ ಯಾವ ಅಧಿಕಾರವನ್ನೂ ಪಂಚಾಯ್ತಿಗಳಿಗೆ ಕೊಡದಿದ್ದರೆ ಹೇಗೆ' ಎಂದು ಪ್ರಶ್ನಿಸಿದರು. `ಪಂಚಾಯ್ತಿಗಳು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಮೂರನೇ ಹಣಕಾಸು ಆಯೋಗದ ವರದಿಯನ್ನು ಯಥಾವತ್ತಾಗಿ ಅನುಷ್ಠಾನ ಮಾಡುವುದೊಂದೇ ಪರಿಹಾರವಾಗಿದೆ' ಎಂದು ತಿಳಿಸಿದರು.

`ಜಿಲ್ಲಾ ಪಂಚಾಯ್ತಿ ಮತ್ತು ತಾಲ್ಲೂಕು ಪಂಚಾಯ್ತಿಗಳಲ್ಲಿ 64 ಇಲಾಖೆಗಳಿವೆ. ಆದರೆ, ಅದಕ್ಕೆ ತಕ್ಕ ಸಿಬ್ಬಂದಿ ಇಲ್ಲ. ಗ್ರಾಮ ಪಂಚಾಯ್ತಿಗಳಿಗೆ ದೊರೆಯುವ ಅನುದಾನದ ಶೇ 60ರಷ್ಟು ಮೊತ್ತ ವಿದ್ಯುತ್ ಬಿಲ್ ಬಾಕಿಗೆ ಮತ್ತು ಉಳಿದ ಶೇ 40ರಷ್ಟು ಭಾಗ ಸಿಬ್ಬಂದಿ ವೇತನಕ್ಕೆ ಹೋಗುತ್ತದೆ. ಇನ್ನು ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಅನುದಾನ ಎಲ್ಲಿದೆ' ಎಂದು ಅವರು ಕೇಳಿದರು.

`ಪಂಚಾಯತ್ ವ್ಯವಸ್ಥೆಯಲ್ಲಿ ಎದುರಾಗುವ ಸಮಸ್ಯೆ ಆಲಿಸಿ, ಪರಿಹಾರ ಕಂಡುಕೊಳ್ಳಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಪಂಚಾಯತ್ ಪರಿಷತ್ ರಚಿಸಲಾಗಿದೆ. 19 ವರ್ಷಗಳಿಂದ ಈ ವ್ಯವಸ್ಥೆ ಜಾರಿಯಲ್ಲಿದೆ. ಪ್ರತಿ ಎರಡು ತಿಂಗಳಿಗೆ ಒಂದಾದರೂ ಸಭೆ ನಡೆಯಬೇಕು. ಆದರೆ, 19 ವರ್ಷಗಳಲ್ಲಿ ಕೇವಲ ಎರಡು ಸಭೆಗಳು ನಡೆದಿವೆ. ಹೀಗಾಗಿ ಸಮಸ್ಯೆಗಳು ಹಾಗೇ ಉಳಿದಿವೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಜೆಡಿಎಸ್ನ ಬಸವರಾಜ ಹೊರಟ್ಟಿ, ಪಟೇಲ್ ಶಿವರಾಂ, ಬಿಜೆಪಿಯ ಗೋ. ಮಧುಸೂದನ್, ಕಾಂಗ್ರೆಸ್ನ ದಯಾನಂದ, ಕೆ. ಪ್ರತಾಪಚಂದ್ರ ಶೆಟ್ಟಿ ಮತ್ತಿತರರು ಪಂಚಾಯಿತಿಗಳ ಬಲವರ್ಧನೆಗೆ ಒತ್ತಾಯಿಸಿದರು. ಪ್ರೊ.ದೊಡ್ಡರಂಗೇಗೌಡ ಅವರು ಸದನದಲ್ಲೇ ಬರೆದ ಕವಿತೆ ವಾಚಿಸಿ ಪಂಚಾಯ್ತಿಗಳ ಸ್ಥಿತಿಗತಿಗೆ ಕನ್ನಡಿ ಹಿಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.