ಶುಕ್ರವಾರ, ಏಪ್ರಿಲ್ 16, 2021
25 °C

ಗ್ರಾಮ ಪಂಚಾಯ್ತಿ ವ್ಯವಸ್ಥೆ ವರದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ಗ್ರಾಮ ಸಭೆಗಳಿಗೆ ಇವತ್ತು ಹೆಚ್ಚಿನ ಅಧಿಕಾರ ನೀಡಲಾಗಿದೆ. ಫಲಾನುಭವಿಗಳ ಆಯ್ಕೆ ಸೇರಿದಂತೆ ಪಂಚಾಯಿತಿಯ ಬಹುತೇಕ ಅಭಿವೃದ್ಧಿ ಕಾರ್ಯಕ್ರಮಗಳ ನಿರ್ಣಯ ಜನರಿಂದಲೇ ಆಗುತ್ತಿರುವುದು ಶ್ಲಾಘನೀಯ ಎಂದು ಎಪಿಎಂಸಿ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್ ಹೇಳಿದರು.ಅವರು ತಾಲ್ಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಬರಹಳ್ಳಿಯಲ್ಲಿ ನಡೆದ ಗ್ರಾಮ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ಗ್ರಾಮ ಪಂಚಾಯಿತಿಗಳ ಎಲ್ಲ ಕಾಮಗಾರಿಗಳ ದಾಖಲೆಗಳು ಗಣಕೀಕೃತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಗ್ರಾಮ ಸಭೆಗಳಲ್ಲಿ ನಡೆಯುವ ಎಲ್ಲ ನಿರ್ಣಯಗಳು, ಫಲಾನುಭವಿಗಳ ಆಯ್ಕೆಗಳು ದಾಖಲಾಗಲಿವೆ. ಇದರಿಂದಾಗಿ ಪಾರದರ್ಶಕ ಆಡಳಿತ ನೀಡಲು ಸಹಾಯಕವಾಗಲಿದೆ ಎಂದು ಹೇಳಿದರು.ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುರಡಯ್ಯ ಮಾತನಾಡಿ, ಪಂಚಾಯಿತಿ ವತಿಯಿಂದ 2010-11ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಲ್ಲಿ 175, ಉಂದಿರಾ ಆವಾಸ್ 22, ಅಲ್ಪಸಂಖ್ಯಾತರಿಗಾಗಿ 16 ಸೇರಿದಂತೆ ಒಟ್ಟು 218 ಮನೆಗಳ ನಿರ್ಮಾಣ ಮಾಡುವ ಗುರಿ ಹೊಂದಲಾಗಿತ್ತು. ಇದರಲ್ಲಿ 31 ಮನೆಗಳ ನಿರ್ಮಾಣ ಪೂರ್ಣವಾಗಿದ್ದು ಉಳಿದ ಮನೆಗಳ ನಿರ್ಮಾಣ ವಿವಿಧ ಹಂತಗಳಲ್ಲಿವೆ ಎಂದು ತಿಳಿಸಿದರು.ಗ್ರಾಮ ಸಭೆ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹನುಮಕ್ಕ ದೇವರಾಜ್ ವಹಿಸಿದ್ದರು. ಸಭೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷ ಪಿ.ಎಂ.ಪ್ರಕಾಶ್ ಕುಮಾರ್, ತಾ.ಪಂ.ಮಾಜಿ ಉಪಾಧ್ಯಕ್ಷ ಗೋಪಾಲ್‌ನಾಯ್ಕ, ಎಪಿಎಂಸಿ ಉಪಾಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ, ಭೂ ನ್ಯಾಯ ಮಂಜೂರಾತಿ ಸಮಿತಿ ಅಧ್ಯಕ್ಷ ಕೆ.ಎಂ.ಮುನಿರಾಮೇಗೌಡ, ತಾ.ಪಂ.ಸದಸ್ಯೆ ಸುಮಾ ಮಂಜುನಾಥ್, ರತ್ನಮ್ಮ ಮುನಿಯಪ್ಪ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.