ಬುಧವಾರ, ಮೇ 25, 2022
29 °C

ಗ್ರಾಮ ಪಥ ವೆಬ್‌ಸೈಟ್‌ಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ (ಕೆಆರ್‌ಆರ್‌ಡಿಎ) ಕೈಗೆತ್ತಿಕೊಂಡಿರುವ ರಸ್ತೆ ಕಾಮಗಾರಿಗಳ ಮಾಹಿತಿ ಬರುವ ಜನವರಿ ಒಂದರಿಂದ ವೆಬ್‌ಸೈಟ್‌ನಲ್ಲಿ ದೊರೆಯಲಿದೆ. ಪ್ರಸ್ತುತ ಕೆಆರ್‌ಆರ್‌ಡಿಎ ಉಸ್ತುವಾರಿಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗಳ ಕುರಿತು ಮಾತ್ರ ವೆಬ್‌ಸೈಟ್ ಮೂಲಕ ಮಾಹಿತಿ ಪಡೆದುಕೊಳ್ಳಬಹುದಾಗಿದೆ.ಕೆಆರ್‌ಆರ್‌ಡಿಎ ವೆಬ್‌ಸೈಟ್ `ಗ್ರಾಮ ಪಥ~ಕ್ಕೆ ((http://www.krrda.in) ವಿಕಾಸ ಸೌಧದಲ್ಲಿ ಮಂಗಳವಾರ ಚಾಲನೆ ನೀಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಜಗದೀಶ ಶೆಟ್ಟರ್, `ಕಿಯೋನಿಕ್ಸ್ ಸಂಸ್ಥೆಯ ಸಹಯೋಗದಲ್ಲಿ ಈ ವೆಬ್‌ಸೈಟ್ ಮತ್ತು ಇದಕ್ಕೆ ಅಗತ್ಯವಿರುವ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ.ಇದು ಒಟ್ಟು 3.5 ಕೋಟಿ ರೂಪಾಯಿಯ ಯೋಜನೆ~ ಎಂದು ತಿಳಿಸಿದರು.ಪಂಚಾಯತ್ ರಾಜ್ ಇಲಾಖೆ ಕೈಗೊಂಡಿರುವ ಯೋಜನೆಗಳ ವಿಸ್ತೃತ ಮಾಹಿತಿ, ಇಲಾಖೆಯ ಸ್ವತ್ತುಗಳ ಮಾಹಿತಿ ಕೂಡ ಈ ವೆಬ್‌ಸೈಟ್‌ನಲ್ಲಿ ದೊರೆಯಲಿದೆ. ಕಾಮಗಾರಿಯ ನಿಖರ ಸ್ಥಳ ಕುರಿತೂ ಮಾಹಿತಿ ದೊರೆಯಲಿದೆ. ಇದಕ್ಕಾಗಿ ಗೂಗಲ್ ಅರ್ಥ್‌ನಿಂದ ಚಿತ್ರಗಳನ್ನು ಬಳಸಿಕೊಳ್ಳಲಾಗುವುದು ಎಂದು ಇಲಾಖೆಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಾಹಿತಿ ನೀಡಿದರು.ಈ ಯೋಜನೆಗೆ ಇಲಾಖೆಯು ಸರ್ಕಾರದಿಂದ ಹೆಚ್ಚಿನ ಹಣಕಾಸು ಅನುದಾನ ಪಡೆದಿಲ್ಲ, ಲಭ್ಯ ಸಂಪನ್ಮೂಲದಲ್ಲೇ ಇದನ್ನು ಅನುಷ್ಠಾನಕ್ಕೆ ತರಲಾಗಿದೆ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.