ಸೋಮವಾರ, ಮೇ 23, 2022
30 °C

ಗ್ರಾಮ ವಿದ್ಯುತ್ ಪ್ರತಿನಿಧಿಗಳ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಬೆಂಗಳೂರು: ರಾಜ್ಯದ ವಿದ್ಯುತ್ ಸರಬರಾಜು ಕಂಪೆನಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸೇವೆಯನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಒಕ್ಕೂಟದ ಸದಸ್ಯರು ನಗರದ ಚಿಕ್ಕಲಾಲ್‌ಬಾಗ್‌ನಿಂದ ಬನ್ನಪ್ಪ ಉದ್ಯಾನದವರೆಗೆ ಮಂಗಳವಾರ ಪ್ರತಿಭಟನಾ ರ್ಯಾಲಿ ನಡೆಸಿದರು.ರಾಜ್ಯದಾದ್ಯಂತ ಇರುವ ಐದು ವಿದ್ಯುತ್ ಸರಬರಾಜು ಕಂಪೆನಿಗಳಲ್ಲಿ ಗ್ರಾಮ ವಿದ್ಯುತ್ ಪ್ರತಿನಿಧಿಗಳು ಸೇವೆ ಸಲ್ಲಿಸುತ್ತಿದ್ದಾರೆ.ಗ್ರಾಮ ಪಂಚಾಯ್ತಿ ಪರಿಮಿತಿಯಲ್ಲಿ ಒಬ್ಬ ಗ್ರಾಮ ವಿದ್ಯುತ್ ಪ್ರತಿನಿಧಿಯನ್ನು 2003 ರಿಂದ ನೇಮಕ ಮಾಡಿಕೊಳ್ಳಲಾಗಿದೆ.ಆದರೆ ಇದುವರೆಗೂ ಕಾಯಂ ನೇಮಕಾತಿ ಮಾಡಿಕೊಂಡಿಲ್ಲ. ಇದರಿಂದ ಸೇವಾ ಭದ್ರತೆ ಇಲ್ಲದಂತಾಗಿದೆ ಎಂದು ಪ್ರತಿಭಟನಾಕಾರರು ದೂರಿದರು. ಒಕ್ಕೂಟದ ಅಧ್ಯಕ್ಷ ಎಸ್.ಆರ್.ಶರಣಪ್ಪ ಮಾಯಕೊಂಡ, ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್, ಉಪಾಧ್ಯಕ್ಷರಾದ ಶಿವರುದ್ರಗೌಡ, ಕೆ.ಆರ್.ಸತೀಶ್, ಎನ್.ಭೈರಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.