ರಾಯಚೂರು: ರಾಜ್ಯ ಸರ್ಕಾರಿ ಕಂದಾಯ ಇಲಾಖೆಯ ಗ್ರಾಮ ಸಹಾಯಕರ ಹುದ್ದೆಯನ್ನು `ಡಿ~ ದರ್ಜೆ ನೌಕರರೆಂದು ಪರಿಗಣಿಸಬೇಕು ಹಾಗೂ ವೇತನ ಪರಿಷ್ಕರಣೆ ಮಾಡಲು ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಒತ್ತಾಯಿಸಿ ರಾಜ್ಯ ಕಂದಾಯ ಇಲಾಖೆಯ ಗ್ರಾಮ ಸಹಾಯಕರು ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ 10.450 ಗ್ರಾಮ ಸಹಾಯಕರು 33 ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದರು. ಈಗಾಗಲೇ ಗ್ರಾಮ ಸಹಾಯಕರ ಹುದ್ದೆಯನ್ನು ಕಾಯಂ ಹುದ್ದೆ ಎಂದು 2007ರಲ್ಲಿ ಘೋಷಿಸಲಾಗಿದೆ.

ಆದರೂ ವೇತನ ಪರಿಷ್ಕರಣೆ ಮಾಡಿಲ್ಲ ಎಂದು ಆಪಾದಿಸಿದರು.ಗ್ರಾಮ ಸಹಾಯಕರನ್ನು `ಡಿ~ ದರ್ಜೆ ನೌಕರರೆಂದು ಪರಿಗಣಿಸಿ 4.800 ರಿಂದ 7.275 ರೂಪಾಯಿ ವೇತನ ನೀಡಬೇಕು ಹಾಗೂ ನಿವೃತ್ತಿ ಹೊಂದಿದ ಗ್ರಾಮ ಸಹಾಯಕರಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡಬೇಕು, ನಿವೃತ್ತಿ ಹೊಂದಿದವರಿಗೆ ಮಾಸಿಕ ಪಿಂಚಣಿ ನೀಡಬೇಕು ಎಂದು ಆಗ್ರಹಿಸಿದರು.

ಮರಣ ಹೊಂದಿದ ಗ್ರಾಮ ಸಹಾಯಕರ ಕುಟುಂಬದ ಸದಸ್ಯರನ್ನೇ ಗ್ರಾಮ ಸಹಾಯಕ ಹುದ್ದೆಗೆ ನೇಮಕ ಮಾಡಿಕೊಳ್ಳಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಭೀಮಣ್ಣ, ತಾಲ್ಲೂಕು ಅಧ್ಯಕ್ಷ ಹೊನ್ನಪ್ಪ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ಗ್ರಾಮ ಸಹಾಯಕರ ಸಂಘದ ತಾಲ್ಲೂಕು ಅಧ್ಯಕ್ಷರಾದ ಲಕ್ಷ್ಮಯ್ಯ ಮಾನ್ವಿ,ಶಿವರಾಜ ದೇವದುರ್ಗ, ಆದೆಪ್ಪ ಲಿಂಗಸುಗೂರು, ರಾಮಣ್ಣ ಸಿಂಧನೂರು ಹಾಗೂ ಗ್ರಾಮ ಸಹಾಯಕರಾದ ಕೆ.ಬಸವರಾಜ ಕಲ್ಲೂರು, ಗೌಸ್ ಮೊಹಿನುದ್ದೀನ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.