ಸೋಮವಾರ, ಏಪ್ರಿಲ್ 12, 2021
25 °C

ಗ್ರಾಹಕರಿಗೆ ಹಕ್ಕುಗಳ ಅರಿವು ಮೂಡಬೇಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಗ್ರಾಹಕರು ತಮಗಿರುವ ಹಕ್ಕುಗಳನ್ನು ತಿಳಿದುಕೊಂಡು ವ್ಯವಹರಿಸುವುದು ಅಗತ್ಯವಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಎ.ಎಸ್. ನಿರ್ವಾಹಣಪ್ಪ ಪ್ರತಿಪಾದಿಸಿದರು.ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ ಹಾಗೂ ಜಿಲ್ಲಾ ಗ್ರಾಹಕರ ಸಂಘದ ಸಂಯುಕ್ತಾಶ್ರಯದಲ್ಲಿ ಗುರುವಾರ ನಡೆದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಸರ್ಕಾರ 1986ರಲ್ಲಿ ಗ್ರಾಹಕರ ರಕ್ಷಣಾ ಕಾಯ್ದೆ ಜಾರಿಗೊಳಿಸಿದೆ. ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯನ್ನು ರಚಿಸಲಾಗಿದೆ. ಆದರೆ, ಈ ವೇದಿಕೆಗಳ ಸದ್ಬಳಕೆಯಾಗಬೇಕಾದರೆ ಆ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದೆ. ಗ್ರಾಹಕರೂ ಆಸಕ್ತಿ ವಹಿಸಬೇಕು ಎಂದು ನುಡಿದರು.ಜಿಲ್ಲಾ ಗ್ರಾಹಕ ವೇದಿಕೆ ಅಧ್ಯಕ್ಷ ರಾಮಚಂದ್ರಪ್ಪ ಮಾತನಾಡಿ, ಕಾನೂನು ಕೇವಲ ವಕೀಲರಿಗೆ ಅಥವಾ ನ್ಯಾಯಾಧೀಶರಿಗೆ ಸೀಮಿತವಾಗಿಲ್ಲ. ಪ್ರತಿಯೊಬ್ಬ ಜನಸಾಮಾನ್ಯನಿಗೂ ಅದರ ಅರಿವು ಮುಖ್ಯ ಎಂದರು.ಗ್ರಾಹಕರ ಹಕ್ಕುಗಳ ವೇದಿಕೆ ಸದಸ್ಯೆ ಸುಹೀಲಾ ನಸ್ರೀನ್ ಮಾತನಾಡಿ, ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ಅರಿವು ಪಡೆಯುವ ಜತೆಗೆ ಹಕ್ಕು ಚಲಾಯಿಸುವುದನ್ನು ಸಹ ಕಲಿಯಬೇಕು. ಇದರಿಂದ ಮಾತ್ರ ವಂಚಕರಿಗೆ ಶಿಕ್ಷೆ ನೀಡಲು ಸಾಧ್ಯ ಎಂದು ನುಡಿದರು.ಯಾವುದೇ ಸರಕು ಹಾಗೂ ಸೇವೆ ಪಡೆದಾಗ ಕಡ್ಡಾಯವಾಗಿ ರಶೀದಿ ಪಡೆಯಬೇಕು. ಇಲ್ಲವಾದಲ್ಲಿ ನ್ಯಾಯ ದೊರಕಿಸಿಕೊಡಲು ಸಾಧ್ಯವಾಗುವುದಿಲ್ಲ. ಸಣ್ಣ ಅನ್ಯಾಯವಾದರೂ ಗ್ರಾಹಕರು ನಿರ್ಲಕ್ಷ್ಯ ಮಾಡಬಾರದು ಎಂದು ಕಿವಿಮಾತು ಹೇಳಿದರು. ಆಹಾರ ಇಲಾಖೆ ಉಪನಿರ್ದೇಶಕ ಮಂಟೆಸ್ವಾಮಿ, ಎಂ.ಎಸ್. ಕುಮಾರ್ ಮತ್ತಿತರರು ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.