ಸೋಮವಾರ, ಜೂನ್ 21, 2021
21 °C

ಗ್ರಾಹಕರ ವೇದಿಕೆ ಹುದ್ದೆ ಖಾಲಿ: ಹೈಕೋರ್ಟ್‌ಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಗ್ರಾಹಕರ ವ್ಯಾಜ್ಯ­ಗಳ ಪರಿಹಾರ ವೇದಿಕೆಯ ಸದಸ್ಯರ ಸ್ಥಾನ, ವಿವಿಧ ಜಿಲ್ಲೆಗಳ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗಳ ಅಧ್ಯಕ್ಷರು ಮತ್ತು ಸದಸ್ಯರ ಸ್ಥಾನ ಭರ್ತಿ ಮಾಡಲು ಗ್ರಾಹಕರ ವ್ಯವಹಾರಗಳ ಇಲಾಖೆ ಮತ್ತು ಕಾನೂನು ಇಲಾಖೆ ಮೀನ–ಮೇಷ ಎಣಿಸುತ್ತಿವೆ ಎಂದು ದೂರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.ಕನಕಪುರದ ಬಿ.ವಿ.ಎಸ್‌. ಮೂರ್ತಿ ಮತ್ತು ಇತರರು ಸಲ್ಲಿಸಿರುವ ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯ­ಮೂರ್ತಿ ಡಿ.ಎಚ್‌. ವಘೇಲಾ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ಪೀಠ ನಡೆಸಿತು. ಅರ್ಜಿ ಕುರಿತು ಪ್ರತಿ ಹೇಳಿಕೆ ಸಲ್ಲಿಸಲು ಕಾಲಾವಕಾಶ ಬೇಕು ಎಂದು ಸರ್ಕಾರಿ ವಕೀಲರು ಕೋರಿದ ಹಿನ್ನೆಲೆ­ಯಲ್ಲಿ ವಿಚಾರಣೆಯನ್ನು ಏಪ್ರಿಲ್‌ 1ಕ್ಕೆ ಮುಂದೂಡಲಾಗಿದೆ.ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿ­ಹಾರ ವೇದಿಕೆಯನ್ನು ರಚಿಸಿಲ್ಲ. ಖಾಲಿ ಹುದ್ದೆಗಳನ್ನು ನಾಲ್ಕು ವಾರ­ಗಳಲ್ಲಿ ಭರ್ತಿ ಮಾಡುವಂತೆ ಹೈ­ಕೋರ್ಟ್‌ 2013ರ ಜೂನ್‌ 3ರಂದು ಆದೇಶಿಸಿದೆ. ಆದರೆ ಇದು­ವರೆಗೂ ಅದು ಕಾರ್ಯರೂಪಕ್ಕೆ ಬಂದಿಲ್ಲ ಎಂದು ಅರ್ಜಿದಾರರ ವಕೀಲ ಎನ್‌.ಪಿ. ಅಮೃತೇಶ ದೂರಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.