ಶನಿವಾರ, ಜೂನ್ 12, 2021
28 °C

ಗ್ರಾಹಕರ ಹಕ್ಕುಗಳ ಮಾಹಿತಿ ಪಡೆಯಿರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ವಿದ್ಯಾರ್ಥಿಗಳು ಗ್ರಾಹಕರ ಹಕ್ಕುಗಳ ಕುರಿತು ವಿಶೇಷವಾದ ಜ್ಞಾನ ಪಡೆದು ಇನ್ನೊಬ್ಬರೊಡನೆ ಮಾಹಿತಿ ಹಂಚಿಕೊಳ್ಳಬೇಕು ಎಂದು ಜಿಲ್ಲೆಯ ಸರ್ವಶಿಕ್ಷಣ ಅಭಿಯಾನದ ಸಮನ್ವಯ ಅಧಿಕಾರಿ ಚನ್ನಬಸಪ್ಪ ಮುಧೋಳ ಕರೆ ನೀಡಿದರು.ಇಲ್ಲಿನ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಗ್ರಾಹಕರ ಹಿತರಕ್ಷಣಾ ವೇದಿಕೆ ವತಿಯಿಂದ ಗ್ರಾಹಕ ಹಿತರಕ್ಷಣಾ ಕಾಯ್ದೆ ಕುರಿತು ಏರ್ಪಡಿಸಿದ್ದ ಉಚಿತ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.ಯುವ ವಕೀಲ ವೈಜನಾಥ ಝಳಕಿ ಮಾತನಾಡಿ, ವಿದ್ಯಾರ್ಥಿಗಳು ಗ್ರಾಹಕರ ಕಾಯ್ದೆಯನ್ನು ಅರಿತು ಅದರ ಮಹತ್ವವನ್ನು ಜನಸಾಮಾನ್ಯರಿಗೆ ತಿಳಿಸಿ, ನೊಂದ ಗ್ರಾಹಕರು ನ್ಯಾಯ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.ಗ್ರಾಹಕರ ಕ್ಲಬ್ ವತಿಯಿಂದ ಏರ್ಪಡಿಸಿದ್ದ ವಿವಿಧ ಗ್ರಾಹಕ ವಿಷಯಗಳ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳಿಗೆ ಕ್ಲಬ್‌ನ ಮುಖ್ಯಸ್ಥೆ ಶ್ರಿದೇವಿ ಬಹುಮಾನ ವಿತರಿಸಿದರು.ಸುನಂದಾ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಡಾ. ಎನ್.ಎಸ್. ಹೂಸೂರ ವೇದಿಕೆ ಮೇಲಿದ್ದರು. ರಾಜಶೇಖರ ಗೋನಾಯಕ ನಿರೂಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.