ಬೆಂಗಳೂರು: ‘ಗ್ರಾಹಕರ ಹಕ್ಕು ಕಾಯ್ದೆಯ ಬಗ್ಗೆ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಸದಸ್ಯೆಯರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಸದ್ಯದಲ್ಲೇ ಕಾರ್ಯಕ್ರಮವನ್ನು ರೂಪಿಸಲಾಗುವುದು’ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ನಗರದ ಶಿಕ್ಷಕರ ಸದನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಕುಟುಂಬ ನಿರ್ವಹಣೆಗೆ ಅಗತ್ಯವಾದ ವಸ್ತುಗಳನ್ನು ಮಹಿಳೆಯರೇ ದಿನನಿತ್ಯ ಖರೀದಿಸುತ್ತಾರೆ. ಹಾಗಾಗಿ ಮಹಿಳೆಯರಲ್ಲಿ ಹಕ್ಕುಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕಿದೆ. ಕಾಯ್ದೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ ಈಗಾಗಲೇ 1,550 ಶಾಲೆಗಳಲ್ಲಿ ಶಾಲಾ ಗ್ರಾಹಕರ ಕ್ಲಬ್ಗಳನ್ನು ರಚಿಸಲಾಗಿದೆ. ಇನ್ನೂ 2,500 ಶಾಲೆಗಳಲ್ಲಿ ಗ್ರಾಹಕರ ಕ್ಲಬ್ ರಚಿಸಲು ಚಿಂತಿಸಲಾಗಿದೆ’ ಎಂದು ಹೇಳಿದರು.

‘ಯಾವುದೇ ವಸ್ತುಗಳನ್ನು ಖರೀದಿಸುವಾಗ ಐಎಸ್ಐ ಅಥವಾ ಅಗ್ಮಾರ್ಕ್ ಮುದ್ರೆ ಇದೆಯೇ ಎಂಬುದನ್ನು ಗ್ರಾಹಕರು ಪರಿಶೀಲಿಸಬೇಕು. ಒಂದೊಮ್ಮೆ ಗುಣಮಟ್ಟದಲ್ಲಿ ಲೋಪದೋಷ ಕಂಡುಬಂದರೆ ಅದನ್ನು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದರು.ಶಾಸಕ ನೆ.ಲ.ನರೇಂದ್ರಬಾಬು ಮಾತನಾಡಿ, ‘ಗ್ರಾಹಕರ ಹಕ್ಕು ಕಾಯ್ದೆಯ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕಿದೆ. ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಂದೋಲನ ನಡೆಸಬೇಕಿದೆ’ ಎಂದು ಹೇಳಿದರು.ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬಿ.ಎ. ಹರೀಶ್ಗೌಡ, ಆಯುಕ್ತ ಡಾ.ಎನ್.ವಿ. ಪ್ರಸಾದ್ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.