ಭಾನುವಾರ, ಮೇ 22, 2022
28 °C

ಗ್ರಾಹಕ ಕ್ಲಬ್ ಸ್ಪರ್ಧೆ: ಅಲ್‌ಬದ್ರಿಯಾಕ್ಕೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುರತ್ಕಲ್: ವಿಶ್ವ ಗ್ರಾಹಕ ದಿನಾಚರಣೆಅಂಗವಾಗಿ ಏರ್ಪಡಿಸಲಾಗಿದ್ದ ಗ್ರಾಹಕ ಕ್ಲಬ್‌ಗಳ ಸ್ಪರ್ಧಾಕೂಟದಲ್ಲಿ  ಪ್ರೌಢಶಾಲಾ ವಿಭಾಗದಲ್ಲಿ ಕೃಷ್ಣಾಪುರ ಅಲ್‌ಬದ್ರಿಯಾ ಪ್ರೌಢಶಾಲೆ ಪ್ರಥಮ ಹಾಗೂ ಬೈಕಂಪಾಡಿಯ ಮೀನಕಳಿಯ ಸರ್ಕಾರಿ ಪ್ರೌಢಶಾಲೆ ದ್ವಿತೀಯ ಸ್ಥಾನ ಪಡೆಯಿತು.ಕಾಲೇಜು ವಿಭಾಗದ ಸ್ಪರ್ಧೆಯಲ್ಲಿ  ಸೈಂಟ್ ಫಿಲೋಮಿನಾ ಕಾಲೇಜು ಪ್ರಥಮ, ಗೋವಿಂದದಾಸ ಕಾಲೇಜು ದ್ವಿತೀಯ ಪ್ರಶಸ್ತಿ ಪಡೆಯಿತು. ಮಂಗಳವಾರ ಸುರತ್ಕಲ್ ಗೋವಿಂದದಾಸ ಕಾಲೇಜಿನ ಸಭಾಂಗಣದಲ್ಲಿ  ಜಿಲ್ಲಾಡಳಿತ,  ಜಿಲ್ಲಾ ಗ್ರಾಹಕ ಸಂಘಗಳ ಒಕ್ಕೂಟ ಆಹಾರ ನಾಗರಿಕ ಸರಬರಾಜು  ಮತ್ತು ಗ್ರಾಹಕ ವ್ಯವಹಾರ ಇಲಾಖೆ ಆಶ್ರಯದಲ್ಲಿ ನಡೆದ ವಿಶ್ವ ಗ್ರಾಹಕರ ದಿನಾಚರಣೆ ಮತ್ತು ಸರ್ಟಿಫಿಕೇಟ್ ಕೋರ್ಸ್ ಪ್ರಮಾಣ ಪತ್ರ ವಿತರಣಾ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಲಾಯಿತು.ಮಂಗಳೂರು ವಿ.ವಿ.ಕುಲಪತಿ ಪ್ರೊ.ಟಿ.ಸಿ.ಶಿವಶಂಕರ್‌ಮೂರ್ತಿ ಪ್ರಶಸ್ತಿ ವಿತರಿಸಿದರು. ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ಜೆ.ಸಾಲಿಯಾನ್, ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರ  ಇಲಾಖೆಯ ಜಿಲ್ಲಾ ಉಪನಿರ್ದೇಶಕ  ವೃಷಭ ರಾಜೇಂದ್ರ ಮೂರ್ತಿ, ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಜ್‌ಮೋಹನ್ ರಾವ್, ಹಿಂದೂ ವಿದ್ಯಾದಾಯಿನಿ ಸಂಘದ ಅಧ್ಯಕ್ಷ ಎಂ.ಎಸ್.ಕೃಷ್ಣ ಭಟ್,ಗ್ರಾಹಕ ಸಂಘಟನೆಗಳ ಒಕ್ಕೂಟದ ಕಾರ್ಯದರ್ಶಿ ಪಿ.ವಿಷ್ಣು ನಾಯಕ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.