ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ ಬಹುಕೋಟಿ ವೆಚ್ಚದ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಕರೆದಿರುವ ಟೆಂಡರ್ ಪ್ರಕ್ರಿಯೆ ಅನ್ವಯ ಮುಂದಿನ ಕ್ರಮ ತೆಗೆದುಕೊಳ್ಳಲು ಹೈಕೋರ್ಟ್ ಸೋಮವಾರ ಪಾಲಿಕೆಗೆ ಆದೇಶಿಸಿದೆ.ಟೆಂಡರ್ ಪ್ರಕ್ರಿಯೆಯನ್ನು ಕೇವಲ ಕಂಪೆನಿಗಳಿಗೆ ಸೀಮಿತಗೊಳಿಸದೇ ಕಾನೂನಿನ ಅನ್ವಯ ಅರ್ಜಿದಾರರು ಸೇರಿದಂತೆ ಎಲ್ಲರಿಗೂ ಭಾಗವಹಿಸಲು ಅನುಮತಿ ನೀಡಬೇಕು ಎಂದು ನ್ಯಾಯಮೂರ್ತಿ ಬಿ.ವಿ.ನಾಗರತ್ನ ನಿರ್ದೇಶಿಸಿದ್ದಾರೆ.

ಟೆಂಡರ್ಗೆ ಕೋರ್ಟ್ ತಡೆ ಇದ್ದುದರಿಂದ ಮುಂದಿನ ಕ್ರಮ ತೆಗೆದುಕೊಳ್ಳಲಾಗದೆ ಪೇಚಿಗೆ ಸಿಲುಕಿದ್ದ ಪಾಲಿಕೆಗೆ ಈ ಆದೇಶ ನಿರಾಳವಾಗಿದೆ.ಟೆಂಡರ್ ಪ್ರಕ್ರಿಯೆಯನ್ನು ಕೇವಲ ಕಂಪೆನಿಗಳಿಗೆ ಸೀಮಿತಗೊಳಿಸಿ ಕಳೆದ ಜ.13ರಂದು ಪಾಲಿಕೆ ನಿರ್ಣಯ ಮಂಡಿಸಿರುವುದನ್ನು ಪ್ರಶ್ನಿಸಿ ಹಲವು ಗುತ್ತಿಗೆದಾರರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಈ ಆದೇಶ ಹೊರಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.