ಭಾನುವಾರ, ನವೆಂಬರ್ 17, 2019
29 °C

ಘರ್ಷಣೆಗೆ ಜೆಡಿಎಸ್ ಹೊಣೆ: ಆರೋಪ

Published:
Updated:

ಶಿಡ್ಲಘಟ್ಟ: ತಾಲ್ಲೂಕಿನ ಮೇಲೂರು ಗ್ರಾಮಪಂಚಾಯಿತಿಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದ ನಂತರ ಗಂಗನಹಳ್ಳಿಯಲ್ಲಿ ಘರ್ಷಣೆ ಹೆಚ್ಚಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಪ್ರಮೀಳಾ ವೆಂಕಟೇಶ್ ಆರೋಪ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಾಲ್ಲೂಕಿನ ಗಂಗನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಘರ್ಷಣೆ ಸಂಬಂಧ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಜೆಡಿಎಸ್ ಕಾರ್ಯಕರ್ತರು ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಿ ನನ್ನ ವಿರುದ್ಧ ಅನವಶ್ಯಕ ದೂರು ನೀಡಿದ್ದಾರೆ ಎಂದು ಆಪಾದಿಸಿದರು.ಹಿರಿಯ ಕಾಂಗ್ರೆಸ್ ಮುಖಂಡ ಸಾದಲಿ ಜಯಪ್ರಕಾಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ. ಜಿಲ್ಲಾ ಪಂಚಾಯಿತಿ ಸದಸ್ಯರಾದ ಸೊಣ್ಣೇನಹಳ್ಳಿ ನಾರಾಯಣಸ್ವಾಮಿ, ಕಂಬದಹಳ್ಳಿ ಸತೀಶ್, ತಾ.ಪಂ. ಅಧ್ಯಕ್ಷ ವೇಣುಗೋಪಾಲ್, ಸದಸ್ಯರಾದ ಡಿಎಸ್‌ಎನ್ ರಾಜು, ಭಕ್ತರಹಳ್ಳಿ ವೆಂಕಟೇಶ್, ಮುಖಂಡರಾದ ರಾಮಚಂದ್ರ, ಗಂಗನಹಳ್ಳಿ ವೆಂಕಟೇಶ್, ಪಂಪ್‌ನಾಗರಾಜ್, ಚೀಮನಹಳ್ಳಿ ಗೋಪಾಲ್, ಗುಡಿಹಳ್ಳಿ ಚಂದ್ರು, ವೆಂಕಟಮೂರ್ತಿ, ತಮ್ಮಣ್ಣ, ದೊಡ್ಡ ಪಾಪಣ್ಣ, ಎಲ್.ಮಧು ಮತ್ತಿತರರು ಹಾಜರಿದ್ದರು.

ಪ್ರತಿಕ್ರಿಯಿಸಿ (+)