ಬೆಂಗಳೂರು: ಪಿಯುಸಿಯಲ್ಲಿ ವಿಜ್ಞಾನ ಓದುತ್ತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಾಗಿ ದೂರದರ್ಶನದ ಚಂದನ ವಾಹಿನಿಯಲ್ಲಿ ಇದೇ 7ರಿಂದ ದೂರಶಿಕ್ಷಣ ಕಾರ್ಯಕ್ರಮ ಪ್ರಸಾರವಾಗಲಿದೆ. ದ್ವಿತೀಯ ವರ್ಷದ ಪಿಯುಸಿ ಓದುತ್ತಿರುವ ವಿಜ್ಞಾನ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗೆ ಮತ್ತು ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಸಿದ್ಧತೆ ನಡೆಸಲು ಸಹಾಯವಾಗುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಪ್ರಸಾರವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಇದೇ 7ರಿಂದ 15ರವರೆಗೆ ಪಿಯುಸಿ ಅಂತಿಮ ಪರೀಕ್ಷೆಗೆ ಸಂಬಂಧಿಸಿದ ವಿಷಯಗಳು ಪ್ರಸಾರವಾಗಲಿದ್ದು, ಮಾರ್ಚ್ 29ರಿಂದ ಏಪ್ರಿಲ್ 25ರವರೆಗೆ ಸಿಇಟಿ ಪರೀಕ್ಷೆ ಸಿದ್ಧತೆಗೆ ಸಂಬಂಧಿಸಿದ ವಿಷಯಗಳು ಪ್ರಸಾರವಾಗಲಿವೆ ಎಂದು ಪ್ರಕಟಣೆ ತಿಳಿಸಿದೆ.
ಚಂದನದಲ್ಲಿ ಪ್ರಸಾರವಾಗುವ ಅಂಶಗಳು ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ http://kea.kar.nic.in ಮತ್ತು ಪದವಿಪೂರ್ವ ಪರೀಕ್ಷಾ ಮಂಡಳಿಯ ವೆಬ್ಸೈಟ್ http://pue.kar.nic.in ನಲ್ಲಿ ಲಭ್ಯವಿರಲಿವೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.