ಶುಕ್ರವಾರ, ಜನವರಿ 24, 2020
28 °C

ಚಂದ್ರಗುತ್ತಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ: ಮಧು ಬಂಗಾರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಂದ್ರಗುತ್ತಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ: ಮಧು ಬಂಗಾರಪ್ಪ

ಸೊರಬ: ಪುರಾಣ ಹಾಗೂ ಇತಿಹಾಸ ಪ್ರಸಿದ್ಧ  ಚಂದ್ರಗುತ್ತಿ ಕ್ಷೇತ್ರದ ಅಭಿವೃದ್ಧಿಗೆ ಚಿಂತನೆ ನಡೆಸಿರುವುದಾಗಿ ವಿರೋಧ ಪಕ್ಷದ ಮುಖ್ಯ ಸಚೇತಕ ಮಧು ಬಂಗಾರಪ್ಪ ತಿಳಿಸಿದರು.ತಾಲ್ಲೂಕು ಚಂದ್ರಗುತ್ತಿ ಗ್ರಾಮದಲ್ಲಿ ವಿವಿಧ ಕಾಮಗಾರಿಗೆ ಈಚೆಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಕ್ಷೇತ್ರದ ಅಭಿವೃದ್ಧಿ ಕುರಿತಂತೆ ಗ್ರಾಮಸ್ಥರಿಂದ ಹಲವು ಮನವಿಗಳು ಬಂದಿದ್ದು, ಹಂತ–ಹಂತವಾಗಿ ಅಭಿವೃದ್ಧಿ ಕೈಗೆತ್ತಿಕೊಳ್ಳ ಲಾಗುವುದು ಎಂದು ತಿಳಿಸಿದರು.ಗುಣಮಟ್ಟದ ಕಾಮಗಾರಿಗಳನ್ನು ಮಾಡುವಲ್ಲಿ ಅಧಿಕಾರಿಗಳು ಎಚ್ಚರಿಕೆ ವಹಿಸಿಬೇಕು ಎಂದು ಸೂಚಿಸಿದರು. ಇದೇ ಸಂದರ್ಭದಲ್ಲಿ ತಾಲ್ಲೂಕಿನ ಯಲವಾಟ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಬಹಿಷ್ಕಾರ ಪ್ರಕರಣದ ಸುದ್ದಿ ಕುರಿತು ಪ್ರಸ್ತಾಪಿಸಿದ ಅವರು, ಇಂತಹ ಅಮಾನವೀಯ ಪದ್ಧತಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿಅವಕಾಶ ಇಲ್ಲ. ಕಾನೂನು ಬಾಹಿರ ಚಟುವಟಿಕೆ  ನಡೆಯಲು ಅವಕಾಶ ನೀಡುವುದಿಲ್ಲ ಎಂದರು. ಬಸಮ್ಮ  ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ, ಸದಸ್ಯ ಗುರುಕುಮಾರ್ ಪಾಟೀಲ್, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಬಸವಲಿಂಗಪ್ಪ, ಉಪಾಧ್ಯಕ್ಷೆ ನೀಲಮ್ಮ ಸುರೇಶ್, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ  ಪ್ರೇಮಾ, ಸದಸ್ಯರಾದ ಚಂದ್ರಪ್ಪ ಅಂಗಡಿ, ಗದ್ದೆಮನೆ ಜಯಮ್ಮ, ಎಂ,ಪಿ.ರತ್ನಾಕರ್, ವೈ,ಆರ್.ದೇಸಾಯಿ, ಮುಜರಾಯಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು  ಹಾಜರಿದ್ದರು.

ಪ್ರತಿಕ್ರಿಯಿಸಿ (+)