ಮಂಗಳವಾರ, ಜೂನ್ 15, 2021
21 °C

ಚಂದ್ರಗುತ್ತಿ ರೇಣುಕಾಂಬಾದೇವಿ ಜಾತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೊರಬ: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬಾ ದೇವಿಯ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆ ಯಿಂದ ನಡೆಯಿತು.



ಸೋಮವಾರ ಸಾಗರ ಉಪ ವಿಭಾಗಾಧಿಕಾರಿ ಡಾ. ಉದಯ ಕುಮಾರ್ ಶೆಟ್ಟಿ ಬೆಳಿಗ್ಗೆ ಸುಮಾರು 11ಕ್ಕೆ ರಥೋತ್ಸವಕ್ಕೆ ಚಾಲನೆ ನೀಡಿದರು.



ಹಾವೇರಿ, ವಿಜಾಪುರ, ರಾಯ ಚೂರು, ಹಿರೇಕೆರೂರು, ಶಿಗ್ಗಾವಿ, ರಾಣೆಬೆನ್ನೂರು ಶಿವಮೊಗ್ಗ, ದಾವಣೆಗೆರೆ ಜಿಲ್ಲೆಗಳಿಂದ ಸಾವಿರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ಧಾರ್ಮಿಕ ವಿಧಿ– ವಿಧಾನಗಳಾದ ಪಡ್ಲಿಗೆ ತುಂಬಿಸುವುದು, ದೀಡ್ ನಮಸ್ಕಾರ, ಮತ್ತು ಕಟ್ಟಿಸುವುದು, ಮುಡಿ ನೀಡುವುದು, ಕಿವಿ ಚುಚ್ಚಿಸುವ ಆಚರಣೆ  ನೆರವೇರಿಸಿದರು. ರೊಟ್ಟಿ, ಬುತ್ತಿ, ಹೋಳಿಗೆಯನ್ನು ಸ್ಥಳದಲ್ಲಿಯೇ ತಯಾರಿಸಿ ದೇವಿಗೆ ಅರ್ಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.