ಚಂದ್ರೇಗೌಡರಿಗೆ ನೋಟಿಸ್ ಜಾರಿ

ಬುಧವಾರ, ಮೇ 22, 2019
32 °C

ಚಂದ್ರೇಗೌಡರಿಗೆ ನೋಟಿಸ್ ಜಾರಿ

Published:
Updated:

ಬೆಂಗಳೂರು: ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲೇ ಎದುರಿಸಬೇಕೆಂಬ ಹೇಳಿಕೆ ನೀಡಿರುವ ಬಗ್ಗೆ ವಿವರಣೆ ಕೋರಿ ಸಂಸದ ಡಿ.ಬಿ.ಚಂದ್ರೇಗೌಡ ಅವರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ನೋಟಿಸ್ ಜಾರಿ ಮಾಡಿದ್ದಾರೆ.`ಹಾಲಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರ ನೇತೃತ್ವದಲ್ಲಿ ಚುನಾವಣೆ ಎದುರಿಸಿದರೆ ಗೆಲ್ಲುವ ವಿಶ್ವಾಸವಿಲ್ಲ. ಯಡಿಯೂರಪ್ಪ ನಾಯಕತ್ವ ಇದ್ದರೆ ಮಾತ್ರ ಗೆಲುವು ಸುಲಭವಾಗಲಿದೆ~ ಎಂದು ಚಂದ್ರೇಗೌಡ ಶನಿವಾರ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಈಶ್ವರಪ್ಪ, ಈ ಬಗ್ಗೆ ವಿವರಣೆ ನೀಡುವಂತೆ ಭಾನುವಾರ ನೋಟಿಸ್ ನೀಡಿದ್ದಾರೆ.ಈ ಕುರಿತು `ಪ್ರಜಾವಾಣಿ~ಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, `ಚಂದ್ರೇಗೌಡರ ಹೇಳಿಕೆಯಿಂದ ಸದಾನಂದ ಗೌಡ ಮತ್ತು ಬಿಜೆಪಿಗೆ ಅವಮಾನ ಆಗಿದೆ. ಯಾರ ನಾಯಕತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬುದನ್ನು ನಿರ್ಧರಿಸಲು ಪಕ್ಷವಿದೆ. ಸದಾನಂದ ಗೌಡರ ನೇತೃತ್ವದಲ್ಲಿ ಚುನಾವಣೆಗೆ ಹೋಗಬಾರದು ಎಂಬ ಹೇಳಿಕೆ ನೀಡಲು ಅವರಿಗೆ ಯಾರು ಅಧಿಕಾರ ಕೊಟ್ಟಿದ್ದಾರೆ ಎಂಬುದನ್ನು ವಿವರಿಸುವಂತೆ ಪತ್ರದಲ್ಲಿ ಸೂಚಿಸಿದ್ದೇನೆ~ ಎಂದರು.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry