ರಾಯಚೂರು: ನಗರದ ಗಂಜ್ ವೃತ್ತದಿಂದ ಆರ್ಟಿಒ ವೃತ್ತದವರೆಗೆ ನಡೆದಿರುವ ಚತುಷ್ಪಥ ರಸ್ತೆ ಕಾಮಗಾರಿ ಮಂದಗತಿಯಲ್ಲಿ ಸಾಗಿದ್ದು, ತೀವ್ರಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ತಮ್ಮ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಶಾಸಕ ಸಯ್ಯದ್ ಯಾಸಿನ್ ಅವರು ಲೋಕೋಪಯೋಗಿ ಖಾತೆ ಸಚಿವ ಸಿ.ಎಂ ಉದಾಸಿ ಅವರಿಗೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿದ ಅವರು, ಗುಲ್ಬರ್ಗದಿಂದ ಶಹಬಾದ ಮೂಲಕ ಯಾದಗಿರಿ, ಶಕ್ತಿನಗರ, ರಾಯಚೂರು, ಯರಗೇರಾ, ಗಿಲ್ಲೇಸುಗೂರು ಮಾರ್ಗವಾಗಿ ಆಂಧ್ರಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿವರ್ತಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯನ್ನಾಗಿ ರಸ್ತೆ ಪರಿವರ್ತಿಸುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಂಜೂರಾತಿ ಕುರಿತು ಲೋಕೋಪಯೋಗಿ ಖಾತೆ ಸಚಿವರು ಹಾಗೂ ಕಾರ್ಯದರ್ಶಿಗಳು ಪತ್ರ ವ್ಯವಹಾರ ಮಾಡಬೇಕು ಎಂದು ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಹೈದರಾಬಾದ್ ಕರ್ನಾಟಕ ಗಡಿ ಪ್ರದೇಶದ ಅಭಿವೃದ್ಧಿಗಾಗಿ ಈಗಿರುವ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಲು ಕೇಂದ್ರ ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ, ಎಂ.ಎಸ್ ಕೃಷ್ಣ ಅವರಿಗೂ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.

ನಗರದ ಗಂಜ್ ವೃತ್ತದಿಂದ ಮಹಾಬಳೇಶ್ವರ ವೃತ್ತದವರೆಗೆ ರಸ್ತೆ ಸ್ವಲ್ಪ ಪ್ರಮಾಣದಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಪಡಿಸಲಾಗಿದೆ. ಇನ್ನುಳಿದ ರಸ್ತೆ ಅಭಿವೃದ್ಧಿ 1.50 ಕೋಟಿ ಮಂಜೂರಾಗಿದೆ. ಆದರೂ ಕಾಮಗಾರಿ ಆರಂಭಗೊಂಡಿಲ್ಲ ಎಂದು ಆಪಾದಿಸಿದ್ದಾರೆ.

ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕೂಡಲೇ ಕಾಮಗಾರಿ ಆರಂಭಿಸಬೇಕು, ರಾಯಚೂರಿನಿಂದ ಮಂತ್ರಾಲಯದ ರಸ್ತೆ ಒಟ್ಟು 20 ಕಿ.ಮೀಯಷ್ಟು ಅಭಿವೃದ್ಧಿಪಡಿಸಲಾಗಿದೆ.

ಆದರೆ, ಇನ್ನುಳಿದ 3 ಕಿಮೀ ರಸ್ತೆ ಅಭಿವೃದ್ಧಿಗೆ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಬೇಕು ಎಂದು ಮನವಿ ಮಾಡಲಾಗಿದೆ ಎಂದು ಶಾಸಕ ಸಯ್ಯದ್ ಯಾಸಿನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.