ಗುರುವಾರ , ಜೂಲೈ 2, 2020
27 °C

ಚನ್ನರಾಯಪಟ್ಟಣ: ಮರಳು ಲಿಂಗಕ್ಕೆ ಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನರಾಯಪಟ್ಟಣ: ಮರಳು ಲಿಂಗಕ್ಕೆ ಪೂಜೆ

ಚನ್ನರಾಯಪಟ್ಟಣ: ಪ್ರತಿ ವರ್ಷದಂತೆ ಶಿವರಾತ್ರಿ ಹಬ್ಬದಂದು ಪಟ್ಟಣದಲ್ಲಿ ವಿಜಯಾನಂದ ಆಶ್ರಮದಲ್ಲಿ  ನಿರ್ಮಿಸಿದ್ದ ’ಮರಳು ಲಿಂಗ’ವನ್ನು ಬುಧವಾರ ಭಕ್ತರು ದರ್ಶನ ಪಡೆದರು.ನೊಣವಿನಕೆರೆಯ ಕಾಡಸಿದ್ದೇಶ್ವರ ಮಠಾಧೀಶ ಕರಿವೃಷಭ ದೇಶಿಕೇಂದ್ರ ಸ್ವಾಮೀಜಿ, ಆಶ್ರಮದ ಜಯದೇವಯೋಗಿ ರಾಜೇಂದ್ರ ಸ್ವಾಮೀಜಿ ಸೇರಿದಂತೆ ಹಲವರು ಮರಳು ಲಿಂಗಕ್ಕೆ ಪೂಜೆ ಸಲ್ಲಿಸಿದರು. ನಂತರ ಭಕ್ತಾಧಿಗಳು ಲಿಂಗದ ದರ್ಶನ ಪಡೆದರು. ಬಿಲ್ವಪತ್ರೆ ಅರ್ಪಿಸಿ ಪೂಜೆ ಸಲ್ಲಿಸಿ ಪ್ರದಕ್ಷಿಣೆ ಹಾಕಿದರು.ಇಂದಿನಿಂದ 9 ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ನಂತರ ಮೆರವಣಿಗೆಯಲ್ಲಿ ಕೊಂಡೊಯ್ದು ರಾಜರಾಜೇಶ್ವರಿ ಕೊಳದಲ್ಲಿ ಲಿಂಗವನ್ನು ವಿಸರ್ಜಿಸಲಾಗುವುದು ಎಂದು ಸ್ವಾಮೀಜಿ ತಿಳಿಸಿದರು.ಪಟ್ಟಣದಲ್ಲಿರುವ ಆಂಜನೇಯ, ಗಣಪತಿ, ಚಂದ್ರಮೌಳೇಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಭಕ್ತರು  ಸರದಿ ಸಾಲಿನಲ್ಲಿ ನಿಂತು ದರ್ಶನ  ಪಡೆದರು. ಕೊಳದ ಆಂಜನೇಯಸ್ವಾಮಿ ದೇಗುಲದಲ್ಲಿ ಅನ್ನದಾನ ಏರ್ಪಡಿಸಲಾಗಿತ್ತು.ತಾಲ್ಲೂಕಿನ ವಿವಿಧ ಶಿವಾಲಯಗಳಲ್ಲಿಯೂ ಭಕ್ತರ ಮಹಾಪೂರ ಇತ್ತು. ಬೆಳಿಗ್ಗೆಯಿಂದಲೇ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ಕೆಲವು ದೇವಾಲಯಗಳಲ್ಲಿ ಗಂಗಾಜಲ ವಿತರಿಸಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.