ಗುರುವಾರ , ಮೇ 13, 2021
34 °C

ಚರಂಡಿ ನೀರು ರಸ್ತೆ ಮೇಲೆ ಸಂಚಾರಕ್ಕೆ ಅಡ್ಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಡಿ: `ಇಲ್ಲಿನ ಗ್ರಾಮದ ಪ್ರತಿಯೊಂದು ರ್ಡಿನಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದೆ. ಆದರೂ ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಇದರಿಂದ ಜನರು ಚರಂಡಿ ನೀರಿನಲ್ಲೇ ಸಂಚರಿಸುವಂಥ ಪರಿಸ್ಥಿತಿ ನಿರ್ಮಾಣವಾಗಿದೆ' ಎಂದು ಜೈಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆರೋಪಿಸಿದ್ದಾರೆ.`ಪಟ್ಟಣ ಸಮೀಪದ ರಾವೂರ ಗ್ರಾಮದ ವಾರ್ಡ್ ಸಂಖ್ಯೆ 3-4ರಲ್ಲಿನ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದ ವೃದ್ಧರು, ಶಾಲಾ ಮಕ್ಕಳು ದಿನನಿತ್ಯ ಚರಂಡಿ ನೀರಿನಲ್ಲಿ ಜಾರಿ ಬೀಳುತ್ತಿದ್ದಾರೆ. ಚರಂಡಿ ನಿರ್ಮಿಸುವಂತೆ ಸ್ಥಳೀಯ ಗ್ರಾಮ ಪಂಚಾಯಿತಿಗೆ ಹಲವು ಬಾರಿ ದೂರು ನೀಡಲಾಗಿದೆ. ಆದರೂ ಯಾವುದೇ ಕ್ರಮಕೈಗೊಂಡಿಲ್ಲ' ಎಂದು ಅಧಿಕಾರಿಗಳ ವಿರುದ್ಧ ಜೈಕರ್ನಾಟಕ ರಕ್ಷಣಾ ವೇದಿಕೆ ರಾವೂರ ಘಟಕದ ಅಧ್ಯಕ್ಷ ವೆಂಕಟೇಶ ಬಮ್ಮಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.`ಈಗಾಗಲೇ ಮಳೆಗಾಲ ಆರಂಭವಾಗಿದೆ. ಇದರಿಂದ ಎಲ್ಲೆಂದರಲ್ಲೇ ನೀರು ನಿಂತು ಮಲೇರಿಯಾ ಸೇರಿದಂತೆ ವಿವಿಧ ರೋಗಗಳು ಬರುವ ಸಾಧ್ಯತೆ ಇದೆ. ಆದ್ದರಿಂದ ಸಂಬಂಧಿಸಿದ ಆರೋಗ್ಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಕಲುಷಿತ ವಾತವಾರಣದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು' ಎಂದು ಜೈಕರವೇ ಯುವರಾಜ ರಾಠೋಡ ಒತ್ತಾಯಿಸಿದ್ದಾರೆ.`ನೀರಿಗಾಗಿ ಪರದಾಡುವಂತಾಗಿದೆ. ಸಮರ್ಪಕ ಕುಡಿಯುವ ನೀರಿನ ಪೂರೈಸಬೇಕು ಮತ್ತು ಗ್ರಾಮದಲ್ಲಿ ಚರಂಡಿ ನಿರ್ಮಾಣ ಮಾಡಬೇಕು. ಇಲ್ಲದಿದ್ದರೆ ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ಮಾಡಲಾಗುತ್ತದೆ' ಎಂದು ಜೈಕವೇ ವಾಡಿ ಅಧ್ಯಕ್ಷ ಶ್ರೀರಾಮ ರಾಠೋಡ ಎಚ್ಚರಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.