ಬುಧವಾರ, ಜೂನ್ 16, 2021
27 °C

ಚಲನಚಿತ್ರ ಅಕಾಡೆಮಿಗೆ ನಟಿ ತಾರಾ ನೇಮಕ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ಚಿತ್ರನಟಿ ತಾರಾ ಮತ್ತು ಲಲಿತಕಲಾ ಅಕಾಡೆಮಿಯ ಅಧ್ಯಕ್ಷರನ್ನಾಗಿ ಚಿ.ಸು. ಕೃಷ್ಣಶೆಟ್ಟಿ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ.

ಈ ಇಬ್ಬರ ಹೆಸರುಗಳನ್ನು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಸೋಮವಾರ ಅಂತಿಮಗೊಳಿಸಿದ್ದು, ಮಂಗಳವಾರ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆ ಇದೆ.

ಚಲನಚಿತ್ರ ಅಕಾಡೆಮಿಯ ಈಗಿನ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರ ಅವಧಿ ಈ ತಿಂಗಳಾಂತ್ಯಕ್ಕೆ ಮುಗಿಯಲಿದೆ.

ಲಲಿತಕಲಾ ಅಕಾಡೆಮಿಯ ಅಧ್ಯಕ್ಷರಾಗಿದ್ದ ಜಿ.ಎಸ್. ಖಂಡೇರಾವ್ ಅವರು ಕಳೆದ ಅಕ್ಟೋಬರ್‌ನಲ್ಲಿ ನಿವೃತ್ತರಾಗಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.