ಗುರುವಾರ , ಜೂನ್ 24, 2021
23 °C

ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನಟಿ ತಾರಾ ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷೆಯಾಗಿ ಏನೇನು ಮಾಡಬೇಕು ಎಂಬ ಕುರಿತು ಬಹಳಷ್ಟು ಕನಸುಗಳನ್ನು ಇಟ್ಟುಕೊಂಡಿದ್ದೇನೆ. ಅವುಗಳನ್ನು ಕಾರ್ಯರೂಪಕ್ಕೆ ತರುವ ಜೊತೆಗೇ, ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಆರಂಭಿಸಿರುವ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗುವುದಕ್ಕೆ ಆದ್ಯತೆ ನೀಡುತ್ತೇನೆ~- ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿ ಬುಧವಾರ ಅಧಿಕಾರ ಸ್ವೀಕರಿಸಿದ ನಟಿ ತಾರಾ ಅವರು ಹೇಳಿದ ಮಾತು ಇದು. ಅಧಿಕಾರ ಸ್ವೀಕರಿಸಿದ ನಂತರ, ನಾಗಾಭರಣ ಜೊತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಚಲನಚಿತ್ರಗಳ ಗುಣಮಟ್ಟ ಹೆಚ್ಚಿಸುವುದೂ ಅಕಾಡೆಮಿಯ ಕೆಲಸ. ಅಂತೆಯೇ ಗುಣಮಟ್ಟದ ಚಿತ್ರಗಳನ್ನು ನೋಡುವ ವೀಕ್ಷಕ ಸಮುದಾಯವನ್ನೂ ಬೆಳೆಸುವ ಕಾರ್ಯ ಆಗಬೇಕು ಎಂದರು.

ವಾರ್ತಾ ಇಲಾಖೆಯ ನಿರ್ದೇಶಕ ಕೆ.ಎಸ್. ಬೇವಿನಮರದ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.