ಚಲವಾದಿ ಮಹಾಸಭಾ ಸಮಾವೇಶ 10ರಂದು

7

ಚಲವಾದಿ ಮಹಾಸಭಾ ಸಮಾವೇಶ 10ರಂದು

Published:
Updated:

ಬಾಗಲಕೋಟೆ: `ಚಲವಾದಿ ಮಹಾಸಭಾದ ರಾಜ್ಯಮಟ್ಟದ ಸಮಾವೇಶ ಹಾಗೂ ಮಹಾಸಭಾದ ಕಟ್ಟಡದ ಭೂಮಿಪೂಜೆ ಜೂನ್ 10ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ~ ಎಂದು ಮಹಾಸಭಾ ಜಿಲ್ಲಾಧ್ಯಕ್ಷ ಅಶೋಕ ನಾರಾಯಣಿ ತಿಳಿಸಿದ್ದಾರೆ.`ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಸಮಾವೇಶವನ್ನು ಉದ್ಘಾಟಿಸಲಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಟ್ಟಡಕ್ಕೆ ಅಡಿಗಲ್ಲು ಹಾಕಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದಾರೆ~ ಎಂದು ಅವರು ಹೇಳಿದ್ದಾರೆ.`ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕಿ ಮೋಟಮ್ಮ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಅನೇಕ ಗಣ್ಯರು ಭಾಗವಹಿಸುವರು~ ಎಂದು ಅವರು ವಿವರಿಸಿದರು.`ಬಾಗಲಕೊಟೆ ಜಿಲ್ಲೆಯಿಂದ 20 ಸಾವಿರ ಜನರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು~ ಎಂದು ಮಹಾಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಡಿ. ಹುನ್ನೂರ, ಗೌರವ ಅಧ್ಯಕ್ಷ ಬಸವರಾಜ ಚಲವಾದಿ, ಜಿಲ್ಲಾ ಖಜಾಂಚಿ ಎನ್.ಬಿ. ಗಸ್ತಿ, ತಾಲ್ಲೂಕು ಅಧ್ಯಕ್ಷ ಗ್ಯಾನಪ್ಪ ಚಲವಾದಿ, ಜಿಲ್ಲಾ ಖಜಾಂಚಿ ಎನ್.ಬಿ. ಗಸ್ತಿ, ವಿವೇಕಾನಂದ ಗರಸಂಗಿ ಮತ್ತಿತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry