ಹೈದರಾಬಾದ್/ಜೈಪುರ/ ಭುವನೇಶ್ವರ (ಪಿಟಿಐ/ಐಎಎನ್ಎಸ್): ಸಾಮಾನ್ಯವಾಗಿ ಉರಿ ಬಿಸಿಲಿಗೆ ಹೆಸರಾದ ಆಂಧ್ರಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ಬೀಸುತ್ತಿರುವ ತೀವ್ರ ಚಳಿಗಾಳಿಯಿಂದಾಗಿ 15 ಮಂದಿ ಮೃತಪಟ್ಟಿದ್ದಾರೆ.

ಕರೀಂನಗರ ಜಿಲ್ಲೆಯಲ್ಲಿ 5 ಮಂದಿ, ವಿಶಾಖಪಟ್ಟಣ ಹಾಗೂ ಗುಂಟೂರು ಜಿಲ್ಲೆಗಳಲ್ಲಿ ತಲಾ 4 ಮಂದಿ, ನಲಗೊಂಡ ಹಾಗೂ ವಾರಂಗಲ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ವೃದ್ಧರು ಹಾಗೂ ಭಿಕ್ಷುಕರೇ ಹೆಚ್ಚು ಎಂದು ಸ್ಥಳೀಯರು ತಿಳಿಸಿದ್ದಾರೆ.

ರಾಜ್ಯದ 23 ಜಿಲ್ಲೆಗಳಲ್ಲಿ ಸಾಮಾನ್ಯ ತಾಪಮಾನದಲ್ಲಿ 3 ರಿಂದ 9 ಡಿಗ್ರಿಯಷ್ಟು ಕುಸಿತ ದಾಖಲಾಗಿದೆ ಎಂದು ಹವಾಮಾನ ಇಲಾಖೆಯ ತಜ್ಞರು ತಿಳಿಸಿದ್ದಾರೆ. ವಿಶಾಖಪಟ್ಟಣದಲ್ಲಿ ಶೂನ್ಯಕ್ಕಿಂತ ಕಡಿಮೆ ಉಷ್ಣಾಂಶ ದಾಖಲಾಗಿದೆ ಎಂದು ಹೇಳಲಾಗಿದ್ದರೂ ಹವಾಮಾನ ಇಲಾಖೆ ಇದನ್ನು ಖಚಿತಪಡಿಸಿಲ್ಲ.

ರಾಜ್ಯದಲ್ಲಿ ತೀವ್ರ ರೀತಿಯಲ್ಲಿ ತಾಪಮಾನ ಕುಸಿತ ಉಂಟಾಗಿರುವುದು ಆಶ್ಚರ್ಯಕ್ಕೆ ಎಡೆಮಾಡಿದೆ. ಹಿಮಾಲಯದಿಂದ ಶೀತಗಾಳಿ ಬೀಸುತ್ತಿರುವುದು ತಾಪಮಾನ ಕುಸಿತಕ್ಕೆ ಕಾರಣ ಎಂದು ವಿಶಾಖಪಟ್ಟಣದ ಚಂಡಮಾರುತ ಮುನ್ಸೂಚನಾ ಕೇಂದ್ರ ತಿಳಿಸಿದೆ. ಗುರುವಾರದವರೆಗೂ ಇದೇ ಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಆದಿಲಾಬಾದ್ ಜಿಲ್ಲೆಯಲ್ಲಿ ರಾತ್ರಿ ತಾಪಮಾನವು 5 ಡಿಗ್ರಿಗಿಂತ ಕಡಿಮೆ ದಾಖಲಾಗಿದ್ದರೆ, ಇದೇ ಜಿಲ್ಲೆಯ ಮಹಾರಾಷ್ಟ್ರದ ಗಡಿಯಲ್ಲಿ ಶತಮಾನದ್ಲ್ಲಲೇ ಕಡಿಮೆ ತಾಪಮಾನವಾದ 4.2 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿದೆ. ಇದೇ ರೀತಿ ಕರಾವಳಿ ಜಿಲ್ಲೆಯಾದ ಶ್ರೀಕಾಕುಳಂನಲ್ಲಿ ದಶಕದಲ್ಲೇ ಅತಿ ಕಡಿಮೆ ತಾಪಮಾನವಾದ 9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ತೀವ್ರ ಚಳಿಯನ್ನು ತಾಳಲಾರದೆ ಮನೆಯಲ್ಲಿ ಸಣ್ಣಗೆ ಬೆಂಕಿ ಹೊತ್ತಿಸಿ ಬೆಚ್ಚಗೆ ಮಲಗಿದ್ದವರಲ್ಲಿ 70 ವರ್ಷದ ವೃದ್ಧರೊಬ್ಬರು ಉಸಿರುಗಟ್ಟಿ ಮೃತಪಟ್ಟು ಕುಟುಂಬದ ಇತರ 6 ಮಂದಿ ಅಸ್ವಸ್ಥಗೊಂಡ ಘಟನೆ ಒಡಿಶಾದ ಕಂದಮಾಲ್ ಜಿಲ್ಲೆಯಲ್ಲಿ ನಡೆದಿದೆ.

ಬೆಳಿಗ್ಗೆ ಮನೆಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ನೆರೆಹೊರೆಯವರು ಬಾಗಿಲನ್ನು ಮುರಿದು ಕೋಣೆಯೊಳಕ್ಕೆ ಪ್ರವೇಶಿಸಿ ಅಸ್ವಸ್ಥಗೊಂಡಿದ್ದವರನ್ನು ಆಸ್ಪತ್ರೆಗೆ ಸೇರಿಸಿದರು. ಕಂದಮಾಲ್ ಜಿಲ್ಲೆಯ ತಾಪಮಾನವು ಮೂರು ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.