ಚಳಿಗೆ ದೆಹಲಿ ಗಡಗಡ: 25 ರೈಲುಗಳ ಸಂಚಾರ ರದ್ದು

ನವದೆಹಲಿ (ಐಎಎನ್ಎಸ್): ದೆಹಲಿಯಲ್ಲಿ ಸೋಮವಾರ ಕನಿಷ್ಠ 6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು ದಟ್ಟ ಮಂಜು ಆವರಿಸಿದೆ. ಇದರಿಂದ ಉತ್ತರ ವಲಯದ 25 ರೈಲುಗಳ ಸಂಚಾರ ರದ್ದುಗೊಂಡಿದೆ.
ದಟ್ಟ ಮಂಜು ಕವಿದಿರುವುದರಿಂದ ರೈಲುಗಳ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. 17 ರೈಲುಗಳು ನಿಗದಿತ ಸಮಯಕ್ಕಿಂತ ತಡವಾಗಿ ಸಂಚರಿಸುತ್ತಿವೆ ಎಂದು ಉತ್ತರ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ದೆಹಲಿಯಲ್ಲಿ ಸದ್ಯ ಕನಿಷ್ಠ ಉಷ್ಣಾಂಶ ವಾರ್ಷಿಕ ಸರಾಸರಿಗಿಂತಲೂ ಕಡಿಮೆ ಮಟ್ಟಕ್ಕೆ ಇಳಿದಿದೆ. ಗರಿಷ್ಠ 19.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.