ಚಾಂಪಿಯನ್ಸ್‌ ಲೀಗ್‌ಗೆ ಮಾರ್ಷ್‌ ಅಲಭ್ಯ

7

ಚಾಂಪಿಯನ್ಸ್‌ ಲೀಗ್‌ಗೆ ಮಾರ್ಷ್‌ ಅಲಭ್ಯ

Published:
Updated:

ಮೆಲ್ಬರ್ನ್‌ (ಐಎಎನ್‌ಎಸ್‌):‌‌ ಇಂಗ್ಲೆಂಡ್‌ ವಿರುದ್ಧದ ಸರಣಿ ವೇಳೆ ಗಾಯಗೊಂಡಿರುವ ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್‌ಮನ್‌ ಶಾನ್‌ ಮಾರ್ಷ್‌ ಚಾಂಪಿಯನ್ಸ್‌ ಲೀಗ್‌ ಟ್ವೆಂಟಿ–20  ಕ್ರಿಕೆಟ್‌ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.ಮಾರ್ಷ್‌ ಪರ್ತ್‌ ಸ್ಕಾರ್ಚರ್ಸ್‌ ತಂಡವನ್ನು ಪ್ರತಿನಿಧಿಸಬೇಕಿತ್ತು. ‘ಶಾನ್‌ ಸ್ನಾಯು ಸೆಳೆತಕ್ಕೆ ಒಳಗಾಗಿದ್ದಾರೆ. ಕಾರ್ಡಿಫ್‌ನಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಏಕದಿನ ಕ್ರಿಕೆಟ್‌ ಸರಣಿಯ ನಾಲ್ಕನೇ ಪಂದ್ಯದಲ್ಲಿ ಈ ಸಮಸ್ಯೆಗೆ ಒಳಗಾದರು. ಹೆಚ್ಚಿನ ಚಿಕಿತ್ಸೆಗಾಗಿ ಅವರು ಪರ್ತ್‌ಗೆ ತೆರಳಲಿದ್ದಾರೆ’ ಎಂದು ಕ್ರಿಕೆಟ್‌ ಆಸ್ಟ್ರೇಲಿಯಾ ಹೇಳಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry