ಮಂಗಳವಾರ, ಮೇ 18, 2021
24 °C

ಚಾಂಪಿಯನ್ಸ್ ಟ್ರೋಫಿ: ಸೆಮಿಫೈನಲ್‌ಗೆ ಭಾರತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಂಡನ್ (ಪಿಟಿಐ): ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ತನ್ನ 2ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಮಂಗಳವಾರ ರಾತ್ರಿ ಭರ್ಜರಿ ಜಯ ಸಾಧಿಸಿದ ಭಾರತ ಸೆಮಿಫೈನಲ್ ಪ್ರವೇಶಿಸಿತು.ಮೊದಲಿಗೆ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತದ ನಾಯಕ ದೋನಿ ಅವರ ಲೆಕ್ಕಾಚಾರ ತಪ್ಪಲಿಲ್ಲ. ಮೊದಲಿಗೆ ಬ್ಯಾಟ್ ಮಾಡಿದ ವೆಸ್ಟ್‌ವೆಂಡೀಸ್ ತಂಡವನ್ನು ನಿಗದಿತ 50 ಓವರ್‌ಗಳಲ್ಲಿ 232 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಭಾರತದ ಬೌಲರ್‌ಗಳು ಯಶಸ್ವಿಯಾದರು. ರವೀಂದ್ರ ಜಡೇಜಾ ಅವರು 5 ವಿಕೆಟ್ ಪಡೆದು ವೆಸ್ಟ್‌ಇಂಡೀಸ್ ತಂಡ ಸಾಧಾರಣಾ ಮೊತ್ತ ಕಲೆ ಹಾಕುವಂತೆ ಮಾಡವಲ್ಲಿ ಮಹತ್ವದ ಪಾತ್ರ ವಹಿಸಿದರು.ನಂತರ ಬ್ಯಾಟ್ ಮಾಡಿದ ಭಾರತ ತಂಡ ಬರೇ 39 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ನಿಗದಿತ ಗುರಿ ತಲುಪಿ 8 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿತು.ಭಾರತದ ಪರ 107 ಎಸೆತಗಳಲ್ಲಿ 102 ರನ್ ಗಳಿಸಿ ಅಜೇಯರಾಗುಳಿದ ಶಿಖರ್ ಧವನ್ ಅವರು ತಮ್ಮ ಭರ್ಜರಿ ಹೊಡೆತಗಳಿಂದ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾದರು.ರೋಹಿತ್ ಶರ್ಮಾ 52 ರನ್ ಗಳಿಸಿದರೆ, ದಿನೇಶ್ ಕಾರ್ತಿಕ್ 51 ರನ್ ಗಳಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.