ಮಂಗಳವಾರ, ಮೇ 18, 2021
22 °C

ಚಾಂಪಿಯನ್ಸ್ ಲೀಗ್‌ಗೆ ಸಚಿನ್ ಅನುಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ (ಐಎಎನ್‌ಎಸ್): ಕಾಲಿನ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿರುವ ಸಚಿನ್ ತೆಂಡೂಲ್ಕರ್ ಸೆಪ್ಟೆಂಬರ್ 23ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಆಡುವುದು ಅನುಮಾನವಾಗಿದೆ.ಸಚಿನ್ ಆಡುವ ಬಗ್ಗೆ ಮುಂಬೈ ಇಂಡಿಯನ್ಸ್ ತಂಡದ ಕೋಚ್ ರಾಬಿನ್ ಸಿಂಗ್ ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ಹರಭಜನ್ ಸಿಂಗ್ ಈ ಟೂರ್ನಿಯಲ್ಲಿ ಆಡುವ ವಿಚಾರವನ್ನು ಖಚಿತ ಪಡಿಸಿದ್ದಾರೆ.  ಆಫ್ ಸ್ಪಿನ್ನರ್ ಸಹ ಗಾಯಗೊಂಡಿದ್ದರು. ಈಗ ಚೇತರಿಸಿಕೊಳ್ಳುತ್ತಿದ್ದಾರೆ.ಇಂಗ್ಲೆಂಡ್ ಪ್ರವಾಸದ ವೇಳೆ ಮಾಸ್ಟರ್ ಬ್ಲಾಸ್ಟರ್ ಗಾಯಕ್ಕೆ ಒಳಗಾಗಿದ್ದರು. ಸೆಪ್ಟೆಂಬರ್ 24ರಂದು ಮುಂಬೈ ಇಂಡಿಯನ್ಸ್ ತಂಡ ತನ್ನ ಚೊಚ್ಚಲ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ಎದುರು ಆಡಲಿದೆ. ಈ ತಂಡದ ಆಟಗಾರರು ಬೆಂಗಳೂರಿನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.