ಚಾಮರಾಜನಗರಕ್ಕೆ ಮುಖ್ಯಮಂತ್ರಿ

7

ಚಾಮರಾಜನಗರಕ್ಕೆ ಮುಖ್ಯಮಂತ್ರಿ

Published:
Updated:

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅ. 7ರಂದು ಚಾಮರಾಜನಗರಕ್ಕೆ ಭೇಟಿ ನೀಡಲಿದ್ದು, ಅಂದೇ 'ಮನಸ್ವಿನಿ' ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.'40 ವರ್ಷ ಮೇಲ್ಪಟ್ಟ ಅವಿವಾಹಿತ ಹಾಗೂ ವಿಚ್ಛೇದನ ಪಡೆದಿರುವ ಮಹಿಳೆಯರಿಗೆ ಈ ಯೋಜನೆಯಡಿ ಪ್ರತಿ ತಿಂಗಳು ₨ 500 ಮಾಸಾಶನ ನೀಡಲಾಗುತ್ತದೆ. ಆರ್ಥಿಕ ನೆರವು ನೀಡಿ ಮಹಿಳೆಯರನ್ನು ಮುಖ್ಯವಾಹಿನಿಗೆ ತರುವುದು ಯೋಜನೆಯ ಮೂಲ ಉದ್ದೇಶ. ಜಿಲ್ಲಾ ಕೇಂದ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಯೋಜನೆಗೆ ಚಾಲನೆ ದೊರೆಯಲಿದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಎಸ್‌. ಮಹದೇವಪ್ರಸಾದ್‌ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಚಾಮರಾಜನಗರಕ್ಕೆ ಮುಖ್ಯಮಂತ್ರಿ ಯಾವಾಗ ಭೇಟಿ ನೀಡುತ್ತಾರೆ? ಎಂದು ಮಾಧ್ಯಮದವರು ಸೇರಿದಂತೆ ಎಲ್ಲರೂ ಪ್ರಶ್ನಿಸುತ್ತಾರೆ. ಈ ಹಿಂದಿನ ಮುಖ್ಯಮಂತ್ರಿಗಳು ಜಿಲ್ಲೆಯ ಇತರೆ ಪ್ರದೇಶಕ್ಕೆ ಭೇಟಿ ನೀಡಿದರೂ ಜಿಲ್ಲಾ ಕೇಂದ್ರಕ್ಕೆ ಮಾತ್ರ ಬರುತ್ತಿರಲಿಲ್ಲ. ಜಿಲ್ಲಾ ಕೇಂದ್ರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತೇವೆ ಎಂಬ ಮೌಢ್ಯಕ್ಕೆ ಜೋತು ಬಿದ್ದಿದ್ದರು. ಸಿದ್ದರಾಮಯ್ಯ ಅವರು ಜಿಲ್ಲಾ ಕೇಂದ್ರದಲ್ಲಿಯೇ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಆ ಮೂಲಕ ಮೌಢ್ಯಕ್ಕೆ ತಿಲಾಂಜಲಿ ನೀಡಲಿದ್ದಾರೆ ಎಂದು ಸಚಿವರು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry