ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ

7

ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ

Published:
Updated:

ಬೆಂಗಳೂರು: ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರೆದಿದೆ.ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ 1 ಸೆಂ.ಮೀ ಮಳೆಯಾಗಿದೆ. ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ 17.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry