ಚಾಮರಾಜನಗರ: `ನನ್ನ ಮನಸ್ಸಿಗೆ ನೋವಾಗಿದೆ. ಹೀಗಾಗಿ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರಿಗೆ ಮನವಿ ಮಾಡಿದ್ದೇನೆ~ ಎಂದು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಶುಕ್ರವಾರ ಇಲ್ಲಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಎರಡು ತಿಂಗಳ ಹಿಂದೆಯೇ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಮುಕ್ತಿಗೊಳಿಸುವಂತೆ ಕೋರಿದ್ದಾನೆ. ಆದರೆ ಮುಖ್ಯಮಂತ್ರಿ ಸ್ಪಂದಿಸಿಲ್ಲ. ನನ್ನ ಕ್ಷೇತ್ರ ಹೊನ್ನಾಳಿ, ದಾವಣಗೆರೆ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲು ನಿರ್ಧರಿಸಿದ್ದೇನೆ. ಈ ಹಿನ್ನೆಲೆಯಲ್ಲಿ ಉಸ್ತುವಾರಿಯಿಂದ ಬಿಡುಗಡೆಗೊಳಿಸಲು ಮನವಿ ಸಲ್ಲಿಸಿದ್ದೇನೆ~ ಎಂದರು.

`ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉತ್ತಮ ಸಹಕಾರ ನೀಡಿದ್ದಾರೆ~ ಎಂದ ಅವರು, ನೋವಿಗೆ ಕಾರಣವೇನು? ಎಂದು ಉತ್ತರಿಸಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.