ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರದ ಅಂಗವಾಗಿ ಸಾವಿರಾರು ಭಕ್ತರು ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಸೂರ್ಯೋದಯಕ್ಕೂ ಮುನ್ನವೇ ಅಮ್ಮನವರಿಗೆ ವಿವಿಧ ಬಗೆಯ ಹೂವುಗಳು ಹಾಗೂ ಚಿನ್ನಾಭರಣ, ರೇಷ್ಮೆ ಸೀರೆಯಿಂದ ಅಲಂಕಾರ ಮಾಡಲಾಗಿತ್ತು. ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು.

ಬಳಿಕ ಗುರುವಾರ ರಾತ್ರಿಯಿಂದಲೇ ಸರತಿ ಸಾಲಿನಲ್ಲಿ ಕಾದು ನಿಂತಿದ್ದ ಭಕ್ತರಿಗೆ ದೇವಿಯ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ತಳಿರು-ತೋರಣ, ಬಣ್ಣದ ಹೂಗಳಿಂದ ಅಲಂಕಾರ ಮಾಡಲಾಗಿತ್ತು.

ಗುರುವಾರ ಮಧ್ಯ ರಾತ್ರಿಯಿಂದಲೇ ಚಾಮುಂಡಿಬೆಟ್ಟಕ್ಕೆ ಜನ ಹೆಚ್ಚಿನ ಸಂಖ್ಯೆಯಲ್ಲಿ ಬರತೊಡಗಿದ್ದರು. ದೇವಿಯ ಭಕ್ತರು ದೂರದ ಊರುಗಳಿಂದ ಆಗಮಿಸಿ ದೇವಸ್ಥಾನದ ಆವರಣದಲ್ಲಿ ತಂಗಿದ್ದರು. ಬೆಳಗಿನ ಪೂಜೆಯಲ್ಲಿ ಭಾಗವಹಿಸಿ, ದೇವರ ಪ್ರಸಾದ ಪಡೆದು ಪುನೀತರಾದರು. ಹರಕೆ ಹೊತ್ತ ಭಕ್ತರು ಚಾಮುಂಡಿ ಪಾದದಿಂದ ಸಾವಿರ ಮೆಟ್ಟಿಲು ಹತ್ತಿ ದರ್ಶನ ಪಡೆದರು. ಯುವತಿಯರು, ಗೃಹಿಣಿಯರು ಎಲ್ಲ ಮೆಟ್ಟಿಲುಗಳಿಗೆ ಅರಿಸಿನ-ಕುಂಕುಮ ಹಚ್ಚಿ, ಹೂ ಹಾಕಿ ಕೈ ಮುಗಿದರು.

ಪ್ರಸಾದ ವಿತರಣೆ: ದೇವಸ್ಥಾನದ ಅಕ್ಕಪಕ್ಕ, ನಂದಿ ವಿಗ್ರಹದ ಬಳಿ ಭಕ್ತರಿಗೆ ಪ್ರಸಾದ ವಿತರಣೆ ಮಾಡಲು ವಿಶೇಷ ಕೌಂಟರ್ ತೆರೆಯಲಾಗಿತ್ತು. ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಹೂ- ಕುಂಕುಮ, ಪ್ರಸಾದವನ್ನು ದೇವಸ್ಥಾನದ ವತಿಯಿಂದಲೇ ಕೊಡುವ ವ್ಯವಸ್ಥೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.