ಬುಧವಾರ, ಮೇ 25, 2022
30 °C

ಚಾರಿತ್ರ್ಯ ರೂಪಿಸುವುದು ಶಿಕ್ಷಣದ ಗುರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಹಂಕ: `ಮಕ್ಕಳಲ್ಲಿ ಉತ್ತಮವಾದ ಚಾರಿತ್ರ್ಯವನ್ನು ರೂಪಿಸುವುದು ಶಿಕ್ಷಣದ ಮೊಟ್ಟ ಮೊದಲ ಧ್ಯೇಯ~ ಎಂದು ತುಮಕೂರು ರಾಮಕೃಷ್ಣ ಮಠದ ವೀರೇಶಾನಂದ ಸರಸ್ವತಿ ಸ್ವಾಮೀಜಿ ಅಭಿಪ್ರಾಯಪಟ್ಟರು.ಉಪನಗರದ ಜ್ಞಾನಜ್ಯೋತಿ ಶಿಕ್ಷಣ ಸಂಸ್ಥೆಯಲ್ಲಿ ಮೊದಲನೇ ವರ್ಷದ ಪಿಯುಸಿ ಮತ್ತು ಪದವಿ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, `ಶಿಕ್ಷಣದ ಮೂಲಕ ಮಕ್ಕಳಲ್ಲಿ ಒಳ್ಳೆಯ ಆಲೋಚನೆಗಳು ಬರಬೇಕು. ಉತ್ತಮ ಚಾರಿತ್ರ್ಯವಂತರಾದರೆ ಮಕ್ಕಳ ಮುಂದಿನ ಭವಿಷ್ಯ ಉತ್ತಮವಾಗಿರುತ್ತದೆ~ ಎಂದು ಕಿವಿಮಾತು ಹೇಳಿದರು.ಕರ್ನಾಟಕ ರಾಜ್ಯ ಗೃಹ ಮಂಡಳಿಯ ನಿವೃತ್ತ ಪ್ರಧಾನ ಕಾರ್ಯದರ್ಶಿ ಜಿ.ವಿ.ಕೊಂಗವಾಡ, ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಬಿ.ಹೊನ್ನಪ್ಪ, ಮಾಜಿ ಅಧ್ಯಕ್ಷ ಎನ್.ಸಿ.ರಾಜಶೇಖರಯ್ಯ, ಪ್ರಾಂಶುಪಾಲ ವಿ.ಎಸ್.ನಂಜುಂಡಪ್ಪ, ಶೇಷಾದ್ರಿಪುರ ಕಾಲೇಜಿನ ಮಾಜಿ ಟ್ರಸ್ಟಿ ವೀರಭದ್ರಯ್ಯ ಇತರರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.