ಚಾಲಕರಿಂದ ಆರ್‌ಟಿಒ ಕಚೇರಿ ಮುತ್ತಿಗೆ

ಸೋಮವಾರ, ಮೇ 20, 2019
33 °C

ಚಾಲಕರಿಂದ ಆರ್‌ಟಿಒ ಕಚೇರಿ ಮುತ್ತಿಗೆ

Published:
Updated:

ದಾವಣಗೆರೆ: ಆಟೋ ಚಾಲಕರಿಗೆ ಪರವಾನಗಿ ಪಡೆಯಲು ಶಿಕ್ಷಣ ಪ್ರಮಾಣಪತ್ರ ಕೇಳುವುದನ್ನು ವಿರೋಧಿಸಿ ಹಾಗೂ ಆಟೋಸ್ಟ್ಯಾಂಡ್, ವಿಶ್ರಾಂತಿಗೃಹ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಆಟೋರಿಕ್ಷಾ ಮತ್ತು ಟ್ಯಾಕ್ಸಿ, ಟ್ರಕ್ ಚಾಲಕರ ಯೂನಿಯನ್ ನೇತೃತ್ವದಲ್ಲಿ ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಲಾಯಿತು.ಜಿಲ್ಲೆಯಲ್ಲಿ ಆಟೋ ಚಾಲಕರು ದಿನನಿತ್ಯ ಸಾರ್ವಜನಿಕ ಸೇವೆಯಲ್ಲಿ ತೊಡಗಿರುತ್ತಾರೆ. ಸರ್ಕಾರಕ್ಕೂ ಇವರಿಂದ ಸಾಕಷ್ಟು ಆದಾಯ ಬರುತ್ತದೆ. ಆದರೆ, ಅದೆಷ್ಟೋ ನಿರುದ್ಯೋಗಿ ಯುವಕರು ಆಟೋರಿಕ್ಷಾ ಚಾಲನಾ ಪರವಾನಗಿ ಕೇಳಲು ಹೋದರೆ 8ನೇ ತರಗತಿಯ ವ್ಯಾಸಂಗ ಪ್ರಮಾಣಪತ್ರ ಕೇಳಲಾಗುತ್ತಿದೆ. ಅಲ್ಲದೇ, ಆಟೋ ಚಾಲನಾ ಪ್ರಮಾಣಪತ್ರ ಪಡೆಯಲು ಕಾರು ಚಾಲನಾ ಪ್ರಮಾಣಪತ್ರ ಕೇಳಲಾಗುತ್ತಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ಸರ್ಕಾರ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕು. ಎಲ್ಲ ಆಟೋರಿಕ್ಷಾಗಳಿಗೆ ಸಿಎನ್‌ಜಿ ಅನಿಲ ಕಿಟ್ ಅಳವಡಿಸಲು ರೂ.25 ಸಾವಿರ ಬಡ್ಡಿರಹಿತ ಸಾಲ ನೀಡಬೇಕು. ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಬೇಕು. ಅಧಿಕಾರಿಗಳನ್ನು ನೇರವಾಗಿ ಭೇಟಿಯಾಗುವ ವ್ಯವಸ್ಥೆ ನಿರ್ಮಾಣವಾಗಬೇಕು. ಆಟೋರಿಕ್ಷಾ ಚಾಲಕರಿಗೆ ಅಲ್ಲಲ್ಲಿ ವಿಶ್ರಾಂತಿಗೃಹ ನಿರ್ಮಿಸಬೇಕು ಎಂದು ಒತ್ತಾಯಿಸಿದರು.ಕಾರ್ಮಿಕ ಮುಖಂಡರಾದ ಎಚ್.ಕೆ. ರಾಮಚಂದ್ರಪ್ಪ, ಆವರಗೆರೆ ವಾಸು, ಸೈಯದ್ ಖಾಜಾಪೀರ್, ಕೆ.ಜಿ. ಉಮೇಶ್ ಆವರಗೆರೆ, ಬಿ.ಎಸ್. ಅಬ್ದುಲ್ ರಹಮಾನ್, ಸಿ. ರಮೇಶ್ ನೇತೃತ್ವ ವಹಿಸಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry