ಬುಧವಾರ, ಏಪ್ರಿಲ್ 21, 2021
25 °C

ಚಿಕ್ಕಂದಿನಲ್ಲೇ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ: ವಿದ್ಯಾರ್ಥಿಗಳು ಪ್ರಾಥಮಿಕ ಹಂತದಿಂದಲೇ ಕ್ರೀಡಾ ಮನೋಭಾವ ಬೆಳೆಸಿಕೊಂಡರೆ ಇನ್ನಷ್ಟು ಆಸಕ್ತಿ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದು ದೇವನಹಳ್ಳಿ ಒಳಾಂಗಣ ಕ್ರೀಡಾಂಗಣ ಅಧ್ಯಕ್ಷ ನಾಗರಾಜ್ ಹೇಳಿದರು.ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ದೇವನಹಳ್ಳಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಏರ್ಪಡಿಸಿದ್ದ ಪ್ರೌಢಶಾಲಾ ಬಾಲಕರ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಪ್ರತಿಯೊಬ್ಬ ಕ್ರೀಡಾಪಟು ತಾನು ಭಾಗವಹಿಸುವ ಕ್ರೀಡೆಯ ನಿಯಮಗಳ ಬಗ್ಗೆ ಸಂಕ್ಷಿಪ್ತ ಅರಿವು ಹೊಂದಿರಬೇಕು.  ಶಿಕ್ಷಣ ಮತ್ತು ಕ್ರೀಡೆಗಳನ್ನು ಸಮಾನವಾಗಿ ಸ್ವೀಕರಿಸಿ ಅಳವಡಿಸಿಕೊಳ್ಳಬೇಕು ಎಂದರು.ಜಿಸಿಐ ಸಂಸ್ಥೆ ಅಧ್ಯಕ್ಷ ರಮೇಶ್, ದೇವನಹಳ್ಳಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಅಧ್ಯಕ್ಷ ಸಿ.ಎಂ.ವೆಂಕಟೇಶ್ ಮಾತನಾಡಿದರು. ಉಪಾಧ್ಯಕ್ಷ ಸತೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಟಿ.ಆರ್ ಲೋಕೇಶ್, ಬಿ.ಪುಟ್ಟಸ್ವಾಮಿ, ಸದಸ್ಯ ನಟರಾಜ್ ಇದ್ದರು.ವಿಜೇತರು: ಸರ್ಕಾರಿ ಪದವಿಪೂರ್ವ ಕಾಲೇಜು, ದೇವನಹಳ್ಳಿ ಪ್ರಥಮ, ಸಿದ್ದಗಂಗಾ ಬೂದಿಗೆರೆ ದ್ವಿತೀಯ, ವಿಶ್ವನಾಥಪುರ ತೃತೀಯ ಸ್ಥಾನ ಪಡೆದು ನಗದು ಹಾಗೂ ಪಾರಿತೋಷಕ ಪಡೆದುಕೊಂಡವು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.