ಗುರುವಾರ , ಮೇ 26, 2022
30 °C

ಚಿಕ್ಕಬಳ್ಳಾಪುರ: ಅಪಘಾತ; ನಾಲ್ವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಸರಕು ಸಾಗಣೆ ವಾಹನ ಮರಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟು 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ತಾಲ್ಲೂಕಿನ ಹೊರವಲಯದ ನಂದಿ ಬೆಟ್ಟದ ಕಣಿವೆ ಬಳಿ ಭಾನುವಾರ ಸಂಜೆ ಸಂಭವಿಸಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ತಾಲ್ಲೂಕಿನ ತರೀಕೆರೆ ಬಳಿಯಿರುವ ಮೇಟಪಾಳ್ಯದ ನಿವಾಸಿಗಳಾದ ಚಾಲಕ ಚೆಲುವರಾಜು (25), ರಾಯಪ್ಪ (23), ರತ್ನಮ್ಮ (30), ಅರುಣ್ (6) ಮೃತಪಟ್ಟರು. ಗಾಯಗೊಂಡ ಬಹುತೇಕರು ಮೇಟಿಪಾಳ್ಯ ನಿವಾಸಿಗಳು. ವಾಹನದಲ್ಲಿ 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಷಣ್ಮುಖಪ್ಪ ಎಂಬುವವರ ಮನೆಗೆ ಸೀಮಂತ ಕಾರ್ಯಕ್ರಮಕ್ಕೆ ಬಂದಿದ್ದ ಗ್ರಾಮಸ್ಥರು ಸಂಜೆ 5.30ರ ಸುಮಾರಿಗೆ ಸರಕು ಸಾಗಣೆ ವಾಹನದಲ್ಲಿ ಗ್ರಾಮಕ್ಕೆ ಮರಳುತ್ತಿದ್ದರು. ಚೆಲುವರಾಜ ವಾಹನ ಚಾಲನೆ ಮಾಡುತ್ತಿದ್ದು, ನಂದಿಬೆಟ್ಟದ ಕಣಿವೆ ಬಳಿ ವಾಹನ ನಿಯಂತ್ರಣ ಕಳೆದುಕೊಂಡ ಮರಕ್ಕೆ ಡಿಕ್ಕಿ ಹೊಡೆದಿದೆ.ವಾಹನ ಉರುಳಿಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟವರು. 30ಕ್ಕೂ ಹೆಚ್ಚು ಮಂದಿಗೆ ಗಾಯಗಳಾದವು. ಗಾಯಾಳುಗಳನ್ನು ಸ್ಥಳೀಯ ಗ್ರಾಮಸ್ಥರ ನೆರವಿನಿಂದ ಚಿಕ್ಕಬಳ್ಳಾಪುರ ಆಸ್ಪತ್ರೆಗೆ ಕರೆದೊಯ್ಯಲಾಯಿತು. 15 ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಬೆಂಗಳೂರು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಆಪ್ತರು ಮೃತಪಟ್ಟಿರುವ ಮತ್ತು ಗಾಯಗೊಂಡಿರುವ ವಿಷಯ ತಿಳಿದ ಸಂಬಂಧಿಕರ ರೋದನ ಮುಗಿಲು ಮುಟ್ಟಿತ್ತು. ತಕ್ಷಣಕ್ಕೆ ಅಂಬುಲೆನ್ಸ್ ಸೌಲಭ್ಯ ಸಿಗದಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಇದ್ದ ಸರ್ಕಾರಿ ಅಧಿಕಾರಿಯೊಬ್ಬರ ಕಾರ್‌ನಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆತರಲಾಯಿತು. ಘಟನಾ ಸ್ಥಳಕ್ಕೆ ತಕ್ಷಣಕ್ಕೆ ಅಂಬುಲೆನ್ಸ್ ಬಾರದಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಖಾಸಗಿ ವಾಹನಗಳ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಕರೆತರಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.