ಬುಧವಾರ, ಅಕ್ಟೋಬರ್ 16, 2019
28 °C

ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ: ವಾರದಲ್ಲಿ ತೀರ್ಮಾನ

Published:
Updated:

ಕೂಡಲಸಂಗಮ: ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಹೆಸರನ್ನು ಒಂದು ವಾರದಲ್ಲಿ ಅಂತಿಮಗೊಳಿಸಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಶುಕ್ರವಾರ ಇಲ್ಲಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಮುಖಂಡರ ಜೊತೆ ಈಗಾಗಲೇ ಈ ಸಂಬಂಧ ಚರ್ಚೆ ನಡೆಸಲಾಗಿದೆ ಎಂದರು.

`ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ.  ಹಿರಿಯರು ಈಗಾಗಲೇ ಸಮಸ್ಯೆಯನ್ನು ಬಗೆಹರಿಸಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಒಡಕು ಉಂಟಾಗದಂತೆ ನೋಡಿಕೊಳ್ಳಲಾಗುವುದು~ ಎಂದು ಹೇಳಿದರು.

Post Comments (+)